ಭಾರೀ ಮಳೆಗೆ ಸಂಪೂರ್ಣವಾಗಿ ಕುಸಿದುಬಿದ್ದ ಮನೆ ಸಂಕಷ್ಟದಲ್ಲಿ ವೃದ್ಧ ಮಹಿಳೆ

Posted on: August 16, 2018

WhatsApp Image 2018-08-16 at 10.06.32 AM

ಮಡಿಕೇರಿ : ಜಿಲ್ಲೆಯಲ್ಲಿ ಧಾರಾಕಾರ ಮಳೆಯಾಗುತ್ತಿದ್ದು ಹಲವೆಡೆ ಇದರಿಂದ ಜನಸಾಮನ್ಯರ ಆಸ್ತಿಪಾಸ್ತಿಗಳಿಗೆ ಹಾನಿಗಳಾಗಿದ್ದು  ಸಂಕಷ್ಟಕ್ಕೆ ಸಿಲುಕಿದ್ದಾರೆ.

ಸತತವಾಗಿ ಸುರಿಯುತ್ತಿರುವ ಭಾರೀ ಮಳೆಗೆ ವಿರಾಜಪೇಟೆ ತಾಲೂಕು ವ್ಯಾಪ್ತಿಗೆ ಒಳಪಡುವ ಸಿದ್ದಾಪುರ ಸಮೀಪದ ಗುಹ್ಯ ಗ್ರಾಮದ ಕಕ್ಕಟ್ಟುಕಾಡುವಿನ ನಿವಾಸಿ ವೃದ್ದ ಮಹಿಳೆ ತಂಗಮ್ಮ ಎಂಬುವವರ ಮನೆ ಸಂಪೂರ್ಣ ಕುಸಿದುಬಿದ್ದಿದೆ. ಸೂರನ್ನು ಕಳೆದುಕೊಂಡ ಮಹಿಳೆ ಬೀದಿಗೆ ಬರುವಂತಾಗಿದ್ದು, ಹಾನಿಗೊಳಗಾಗಿ ಸೂರನ್ನು ಕಳೆದುಕೊಂಡು ಸಂಕಷ್ಟದಲ್ಲಿರುವವರ ನೆರವಿಗೆ ಕೂಡಲೇ ಜಿಲ್ಲಾಡಳಿತ ಸ್ಪಂದಿಸಿ ಸೂಕ್ತ ಪರಿಹಾರ ಒದಗಿಸಿಕೊಡಬೇಕೆಂಬುವುದು ಸಾರ್ವಜನಿಕರ ಒತ್ತಾಯವಾಗಿದೆ.

WhatsApp Image 2018-08-16 at 10.05.47 AM

ನಿಮ್ಮ ಅಭಿಪ್ರಾಯ ತಿಳಿಸಿ

Your email address will not be published. Required fields are marked *