ಭೂಕುಸಿತ ಹಿನ್ನೆಲೆ ಮಡಿಕೇರಿ-ಸಂಪಾಜೆ ಸಾರಿಗೆ ಸಂಚಾರಕ್ಕೆ ಬದಲಿ ಮಾರ್ಗದ ವ್ಯವಸ್ಥೆ

Posted on: August 10, 2018

Z-MANGALORE-ROAD-1
ಮಡಿಕೇರಿ : ಕೊಡಗು ಜಿಲ್ಲೆಯ ಮುಖಾಂತರ ಹಾದು ಹೋಗುವ ರಾಷ್ಟ್ರೀಯ ಹೆದ್ದಾರಿ 275ರ ಸರಪಳಿ 94.980 ಹಾಗೂ 77.800 ರಲ್ಲಿ ರಸ್ತೆ ಬಿರುಕುಬಿಟ್ಟಿದ್ದು, ಸರಪಳಿ 98.200ರಲ್ಲಿ ಭೂಕುಸಿತವಾಗಿರುವುದಲ್ಲದೆ, ಭೂಕುಸಿತವಾಗಿರುವ ರಸ್ತೆಯ ಇನ್ನೊಂದು ಪಾಶ್ರ್ವದಲ್ಲಿನ ಬರೆ ಕುಸಿಯುವ ಹಂತದಲ್ಲಿದೆ.

ಈ ಮಾರ್ಗವಾಗಿ ಅಧಿಕ ಭಾರದ ಮತ್ತು ಲಾಂಗ್ ರ್ಚಾಸಿಸ್ ವಾಹನಗಳು ಸಂಚರಿಸುವುದರಿಂದ ಸಾರ್ವಜನಿಕ ಮತ್ತು ರಸ್ತೆ ಸುರಕ್ಷತೆಗೆ ಧಕ್ಕೆಯಾಗುವ ಸಂಭವವಿರುವುದರಿಂದ ಕರ್ನಾಟಕ ಪೋಲೀಸ್ ಕಾಯ್ದೆ 1963ರ ವಿಧಿ 31ರಂತೆ ಮತ್ತು ಮೋಟಾರು ವಾಹನ ಕಾಯ್ದೆ 1988ರ ಕಲಂ 115 ಹಾಗೂ ಕರ್ನಾಟಕ ಮೋಟಾರು ವಾಹನಗಳ ನಿಯಮ 1989ರ (ತಿದ್ದುಪಡಿ ನಿಯಮಾವಳಿ 1990) ನಿಯಮ 221ಎ(5)ರಲ್ಲಿ ದತ್ತವಾದ ಅದಿsಕಾರದಂತೆ ಕೊಡಗು ಜಿಲ್ಲೆಯಾದ್ಯಂತ ಭಾರೀ ವಾಹನಗಳ ಸಂಚಾರ ವ್ಯವಸ್ಥೆ ವಿಚಾರವಾಗಿ 2018 ರ ಜನವರಿ 19 ರಂದು ಹೊರಡಿಸಿದ್ದ ಆದೇಶವನ್ನು ತಕ್ಷಣದಿಂದ ಜಾರಿಗೆ ಬರುವಂತೆ ಹಿಂಪಡೆದು ರಾಷ್ಟ್ರೀಯ ಹೆದ್ದಾರಿ 275ರ ಸಂಪಾಜೆ-ಮಡಿಕೇರಿ-ಸುಂಟಿಕೊಪ್ಪ-ಕುಶಾಲನಗರ ಮಾರ್ಗದಲ್ಲಿ ಸೆಪ್ಟೆಂಬರ್ 29 ವರೆಗೆ ಸಂಚಾರ ವ್ಯವಸ್ಥೆಯನ್ನು ನಿರ್ವಹಿಸಲು ಆದೇಶಿಸಲಾಗಿದೆ.

ನಿರ್ಬಂಧಿತ ವಾಹನಗಳು : ವಾಹನದ ಗರಿಷ್ಟ ನೋಂದಾಯಿತ ತೂಕ 16,200 ಕೆ.ಜಿ.ಗಿಂತ ಹೆಚ್ಚಿನ ಸರಕು ಸಾಗಾಣೆ ಮಾಡುವ ಸರಕು ಸಾಗಾಣಿಕೆ ವಾಹನಗಳು. ಭಾರೀ ವಾಹನಗಳಾದ ಬುಲೆಟ್ ಟ್ಯಾಂಕರ್ಸ್, ಶಿಪ್ ಕಾರ್ಗೋ ಕಂಟೈನರ್ಸ್, ಲಾಂಗ್ ಚಾಸಿಸ್ (ಮಲ್ಟಿ ಆಕ್ಸಿಲ್) ವಾಹನಗಳು

ನಿರ್ಬಂಧದಿಂದ ವಿನಾಯಿತಿ ನೀಡಿದ ವಾಹನಗಳು : ಅಡುಗೆ ಅನಿಲ ಮತ್ತು ಇಂಧನ ಪೂರೈಕೆ ವಾಹನಗಳು. ಹಾಲು ಪೂರೈಕೆ ವಾಹನಗಳು. ಸರ್ಕಾರಿ ಕೆಲಸದ ನಿಮಿತ್ತ ಉಪಯೋಗಿಸಲ್ಪಡುವ ವಾಹನಗಳು. ಶಾಲಾ ಕಾಲೇಜು ಮತ್ತು ಸಾರ್ವಜನಿಕ ಪ್ರಯಾಣಿಕ ವಾಹನಗಳು (ಮಲ್ಟಿ ಆಕ್ಸಿಲ್ ಬಸ್‍ಗಳು ಸೇರಿದಂತೆ). “ಮಡಿಕೇರಿ–ಮಂಗಳೂರು ರಸ್ತೆಯ ಸರಪಳಿ 98.200 ರಲ್ಲಿ (ಮಡಿಕೇರಿಯಿಂದ ಸುಮಾರು 1 ಕಿ.ಮೀ ದೂರದಲ್ಲಿ) ಭೂಕುಸಿತವಾಗಿರುವ ಹಿನ್ನಲೆ ತುರ್ತಾಗಿ ದುರಸ್ತಿ ಕಾಮಗಾರಿಗಳನ್ನು ಕೈಗೊಳ್ಳಬೇಕಾಗಿದೆ.

ಜೊತೆಗೆ ಭೂ ಕುಸಿತವಾಗಿರುವ ಪ್ರದೇಶದಲ್ಲಿ ಭಾರೀ ವಾಹನಗಳು ಸಂಚರಿಸಿದಲ್ಲಿ ಇನ್ನೂ ಹೆಚ್ಚಿನ ರೀತಿಯಲ್ಲಿ ಭೂಕುಸಿತವಾಗುವ ಸಂಭವ ಇರುವುದರಿಂದ, ತಾತ್ಕಾಲಿಕ ಸಂಚಾರ ಯೋಗ್ಯ ರಸ್ತೆ ದುರಸ್ತಿ ಕಾರ್ಯ ಪೂರ್ಣಗೊಳ್ಳುವವರೆಗೆ ಸಾರ್ವಜನಿಕರ ಹಾಗೂ ಪ್ರಯಾಣಿಕರ ಸುರಕ್ಷತೆಯ ದೃಷ್ಟಿಯಿಂದ ಮಡಿಕೇರಿ ಸಂಪಾಜೆ ನಡುವೆ ಸಂಚರಿಸುವ ಎಲ್ಲಾ ವಾಹನಗಳು ರಾಷ್ಟೀಯ ಹೆದ್ದಾರಿ 275 ರ ಸರಪಳಿ 99.500ರ ಮಡಿಕೇರಿ ಜಿ.ಟಿ.ವೃತ್ತದಿಂದ ವಿರಾಜಪೇಟೆ ರಸ್ತೆಯ ಮೇಕೇರಿ ಮೂಲಕ ಬದಲಿ ಮಾರ್ಗ ಬಳಸಿ ಸರಪಳಿ 96.300ರ ತಾಳತ್‍ಮನೆ ಮಾರ್ಗವಾಗಿ ಆಗಮಿಸಲು ಮತ್ತು ಹಿಂತೆರಳಲು ಜಿಲ್ಲಾಧಿಕಾರಿ ಪಿ.ಐ.ಶ್ರೀವಿದ್ಯಾ ಅವರು ಆದೇಶಿಸಿದ್ದಾರೆ. Z-MANGALORE-ROAD-2

ನಿಮ್ಮ ಅಭಿಪ್ರಾಯ ತಿಳಿಸಿ

Your email address will not be published. Required fields are marked *