ಬ್ರೇಕಿಂಗ್ ನ್ಯೂಸ್
ಹೈ ಕಮಾಂಡ್ ಸೂಚಿಸಿದ ಅಭ್ಯರ್ಥಿಗಳ ಗೆಲುವಿಗೆ ಶ್ರಮಿಸಲು ಮಡಿಕೇರಿ ನಗರ ಕಾಂಗ್ರೆಸ್ ಸಮಿತಿ ಸಭೆಯಲ್ಲಿ ನಿರ್ಣಯ , ಕೇಂದ್ರದ 546 ಕೋಟಿ ರೂ. 8 ಜಿಲ್ಲೆಗಳಿಗೆ ವಿನಿಯೋಗ ಮುಖ್ಯಮಂತ್ರಿ ಕುಮಾರಸ್ವಾಮಿ , ಕೊಡಗು ಸಂತ್ರಸ್ತರಿಗೆ ಮನೆ ನಿರ್ಮಾಣಕ್ಕೆ ಗುದ್ದಲಿ ಪೂಜೆ ನೆರವೇರಿಸಿದ ಸಿಎಂ , ಅಪರಾಧ ತಡೆಗೆ ಸಾರ್ವಜನಿಕರ ಸಹಭಾಗಿತ್ವ ಅಗತ್ಯ ಕೊಡಗು ಎಸ್‍ಪಿ ಸುಮನ್ ಡಿ.ಪೆನ್ನೇಕರ್ , ಸಶಸ್ತ್ರ ಪಡೆಗಳ ಧ್ವಜ ದಿನಾಚರಣೆ , ಡಿ. 10ರಿಂದ 21ರವರೆಗೆ ವಿಧಾನ ಪರಿಷತ್ ಸದಸ್ಯೆ ವೀಣಾ ಅಚ್ಚಯ್ಯ ಅಲಭ್ಯ , ಅಯ್ಯಂಡ್ರ ರೋಹಿಣಿ ನಾಣಯ್ಯನವರ ಕುಂಚದಲ್ಲಿ ಅರಳಿದ ಭತ್ತದ ತೆನೆಗೂಡು , ಮಡಿಕೇರಿಯಲ್ಲಿ ಸ್ವಚ್ಛತಾ ಜಾಗೃತಿ ಜಾಥ ಸ್ವಚ್ಛ ಪರಿಸರ ನಿರ್ಮಾಣಕ್ಕೆ ಜಯ ಚಿಣ್ಣಪ್ಪ  ಕರೆ  , ಗೌಡ ಜನಾಂಗದ ಕ್ರಿಕೆಟ್ ಪಂದ್ಯಾಟ , ಹಳೇ ವಿದ್ಯಾರ್ಥಿಗಳಿಂದ ಕೊಡುಗೆ ,

ಮಳೆಯ ಅಬ್ಬರಕ್ಕೆ ಮತ್ತೊಮ್ಮೆ ಕಾವೇರಿ ಒಡಲು ಭರ್ತಿ

Posted on: August 9, 2018

71
ಮಡಿಕೇರಿ : ಜಿಲ್ಲೆಯಲ್ಲಿ ಮತ್ತೆ ಮಳೆಯ ಅಬ್ಬರ ಶುರುವಾಗಿದ್ದು, ಕಳೆದೆರಡು ದಿನದ ಅವಧಿಯಲ್ಲಿ ಭಾರೀ ಮಳೆಯಾಗಿದ್ದು ಮತ್ತೊಮ್ಮೆ ಕಾವೇರಿಯ ಒಡಲು ಭರ್ತಿಯಾಗಿ ಭಾಗಮಂಡಲದ ತ್ರಿವೇಣಿ ಸಂಗಮದ ನೀರು ರಸ್ತೆಗಳನ್ನು ಆವರಿಸಿದ್ದು ರಸ್ತೆ ಸಂಪರ್ಕ ಕಡಿತಗೊಂಡಿದೆ ಅಲ್ಲದೆ ಜಿಲ್ಲೆಯ ಹಲವೆಡೆ ಭೂಕುಸಿತಗಲುಂಟಾಗಿದೆ. ಹಲವು ಮನೆಗಳು ಹಾನಿಗೀಡಾಗಿವೆ. ನದಿ ತೊರೆಗಳು ಉಕ್ಕಿಹರಿಯುತ್ತಿದ್ದು ಗದ್ದೆಗಳು ಸಂಪೂರ್ಣ ಜಲಾವೃತವಾಗಿವೆ.

WhatsApp Image 2018-08-09 at 11.29.08 AM

ಮಳೆ ವಿವರ :: ಕಳೆದ 24 ಗಂಟೆಗಳ ಅವಧಿಯಲ್ಲಿ ಕೊಡಗು ಜಿಲ್ಲೆಯಲ್ಲಿ ಸರಾಸರಿ ಮಳೆ 72.84 ಮಿ.ಮೀ. ಕಳೆದ ವರ್ಷ ಇದೇ ದಿನ 2.08 ಮಿ.ಮೀ., ಜನವರಿಯಿಂದ ಇಲ್ಲಿಯವರೆಗಿನ ಮಳೆ 2786.71 ಮಿ.ಮೀ, ಕಳೆದ ವರ್ಷ ಇದೇ ಅವಧಿಯಲ್ಲಿ 1341.45 ಮಿ.ಮೀ ಮಳೆಯಾಗಿತ್ತು.

ಮಡಿಕೇರಿ ತಾಲ್ಲೂಕಿನಲ್ಲಿ ಇಂದಿನ ಸರಾಸರಿ ಮಳೆ 91.20 ಮಿ.ಮೀ. ಕಳೆದ ವರ್ಷ ಇದೇ ದಿನ 6.25 ಮಿ.ಮೀ. ಜನವರಿಯಿಂದ ಇಲ್ಲಿಯವರೆಗಿನ ಮಳೆ 3908.68 ಮಿ.ಮೀ, ಕಳೆದ ವರ್ಷ ಇದೇ ಅವಧಿಯಲ್ಲಿ 1905.25 ಮಿ.ಮೀ. ಮಳೆಯಾಗಿತ್ತು.

ವಿರಾಜಪೇಟೆ ತಾಲ್ಲೂಕಿನಲ್ಲಿ ಇಂದಿನ ಸರಾಸರಿ ಮಳೆ 49.92 ಮಿ.ಮೀ. ಕಳೆದ ವರ್ಷ ಇದೇ ದಿನ 0.00 ಮಿ.ಮೀ. ಜನವರಿಯಿಂದ ಇಲ್ಲಿಯವರೆಗಿನ ಮಳೆ 2223.93 ಮಿ.ಮೀ. ಕಳೆದ ವರ್ಷ ಇದೇ ಅವಧಿಯಲ್ಲಿ 1087.61 ಮಿ.ಮೀ. ಮಳೆಯಾಗಿತ್ತು.

ಸೋಮವಾರಪೇಟೆ ತಾಲ್ಲೂಕಿನಲ್ಲಿ ಇಂದಿನ ಸರಾಸರಿ ಮಳೆ 77.40 ಮಿ.ಮೀ. ಕಳೆದ ವರ್ಷ ಇದೇ ದಿನ 0.00 ಮಿ.ಮೀ ಜನವರಿಯಿಂದ ಇಲ್ಲಿಯವರೆಗಿನ ಮಳೆ 2227.53 ಮಿ.ಮೀ. ಕಳೆದ ವರ್ಷ ಇದೇ ಅವಧಿಯಲ್ಲಿ 1031.48 ಮಿ.ಮೀ. ಮಳೆಯಾಗಿತ್ತು.

ಜಿಲ್ಲೆಯಲ್ಲಿ ಹೋಬಳಿವಾರು ದಾಖಲಾಗಿರುವ ಮಳೆ ವಿವರ ::
ಮಡಿಕೇರಿ ಕಸಬಾ 144, ನಾಪೋಕ್ಲು 62.40, ಸಂಪಾಜೆ 96, ಭಾಗಮಂಡಲ 62.40, ವಿರಾಜಪೇಟೆ ಕಸಬಾ 68, ಹುದಿಕೇರಿ 73.50, ಶ್ರೀಮಂಗಲ 69.80, ಪೊನ್ನಂಪೇಟೆ 28.20, ಅಮ್ಮತ್ತಿ 45, ಬಾಳೆಲೆ 15, ಸೋಮವಾರಪೇಟೆ ಕಸಬಾ 82, ಶನಿವಾರಸಂತೆ 72.20, ಶಾಂತಳ್ಳಿ 132, ಕೊಡ್ಲಿಪೇಟೆ 39, ಕುಶಾಲನಗರ 30, ಸುಂಟಿಕೊಪ್ಪ 109.20 ಮಿ.ಮೀ. ಮಳೆಯಾಗಿದೆ.

ಹಾರಂಗಿ ಜಲಾಶಯದ ನೀರಿನ ಮಟ್ಟ ::
ಹಾರಂಗಿ ಜಲಾಶಯದ ಗರಿಷ್ಠ ಮಟ್ಟ 2,859 ಅಡಿಗಳು, ಇಂದಿನ ನೀರಿನ ಮಟ್ಟ 2858.43 ಅಡಿಗಳು, ಕಳೆದ ವರ್ಷ ಇದೇ ದಿನ 2858.28 ಅಡಿ. ಇಂದಿನ ನೀರಿನ ಒಳಹರಿವು 15247 ಕ್ಯುಸೆಕ್, ಕಳೆದ ವರ್ಷ ಇದೇ ದಿನ ನೀರಿನ ಒಳಹರಿವು 3907 ಕ್ಯುಸೆಕ್. ಇಂದಿನ ನೀರಿನ ಹೊರ ಹರಿವು ನದಿಗೆ 11599 ಕ್ಯುಸೆಕ್. ನಾಲೆಗೆ 1500 ಕ್ಯುಸೆಕ್. ಕಳೆದ ವರ್ಷ ಇದೇ ದಿನ ನದಿಗೆ 5200 ಕ್ಯುಸೆಕ್. ನಾಲೆಗೆ 50 ಕ್ಯುಸೆಕ್.

73

 

WhatsApp Image 2018-08-09 at 11.33.28 AM

ನಿಮ್ಮ ಅಭಿಪ್ರಾಯ ತಿಳಿಸಿ

Your email address will not be published. Required fields are marked *