ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ವಿಧಿವಶ

Posted on: August 16, 2018

vajpayee-file-pti

ನವದೆಹಲಿ : ಬಿಜೆಪಿ ಮುಖಂಡ ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ (93) ನಿಧನರಾಗಿದ್ದಾರೆ. ಆರೋಗ್ಯ ಸಮಸ್ಯೆಯಿಂದ ಬಳಲುತ್ತಿದ್ದ ವಾಜಪೇಯಿ ಇಂದು ಚಿಕಿತ್ಸೆ ಫಲಕಾರಿಯಾಗದೇ ದೆಹಲಿಯಲ್ಲಿರುವ ಏಮ್ಸ್ ಆಸ್ಪತ್ರೆಯಲ್ಲಿ ವಿಧಿವಶರಾದರು.

ಆರೋಗ್ಯ ಸಮಸ್ಯೆಯಿಂದ ಬಳಲುತ್ತಿದ್ದ ವಾಜಪೇಯಿ ಕೆಲ ವರ್ಷಗಳಿಂದ ಸಾರ್ವಜನಿಕ ಜೀವನದಲ್ಲಿ ಕಾಣಿಸಿಕೊಳ್ಳುತ್ತಿರಲಿಲ್ಲ. ಕೆಲ ತಿಂಗಳ ಹಿಂದೆ ಏಮ್ಸ್ ಆಸ್ಪತ್ರೆಗೆ ದಾಖಲಾಗಿ ಬಳಿಕ ಡಿಸ್ಚಾರ್ಜ್ ಆಗಿದ್ದರು. ಆದರೆ ನಂತರ ಅವರ ಆರೋಗ್ಯದಲ್ಲಿ ಏರುಪೇರಾದ ಹಿನ್ನೆಲೆಯಲ್ಲಿ ಹೆಚ್ಚಿನ ಚಿಕಿತ್ಸೆಗೆ ಮತ್ತೆ ಏಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿತ್ತು.

ಮಧ್ಯಪ್ರದೇಶದ ಗ್ವಾಲಿಯರ್ ಸಮೀಪದ ಶಿಂದೆ ಕಿ ಚವ್ವಾಣಿ ಹಳ್ಳಿಯಲ್ಲಿ ಮಧ್ಯಮ ವರ್ಗದ ಬ್ರಾಹ್ಮಣ ಕುಟುಂಬದಲ್ಲಿ ಕೃಷ್ಣ ಬಿಹಾರಿ ಮತ್ತು ಕೃಷ್ಣಾ ದೇವಿ ದಂಪತಿಗೆ 1924ರ ಡಿಸೆಂಬರ್ 25ರಂದು ವಾಜಪೇಯಿ ಜನಿಸಿದ್ದರು. ಹಿಂದಿ, ಇಂಗ್ಲಿಷ್, ಸಂಸ್ಕೃತ ಭಾಷಾ ಪ್ರೌಢಿಮೆ ಬೆಳೆಸಿದ್ದ ವಾಜಪೇಯಿ ಕಾನ್ಪುರದ ಲಕ್ಷ್ಮೀಬಾಯಿ ಕಾಲೇಜಿನಿಂದ ರಾಜಕೀಯ ಶಾಸ್ತ್ರದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದರು.

ವಾಜಪೇಯಿ ಆರೋಗ್ಯ ತೀವ್ರವಾಗಿ ಹದಗೆಟ್ಟಿದ್ದು ಇದೀಗ ನಿರ್ಣಾಯಕ ಹಂತ ತಲುಪಿದೆ. ಸದ್ಯ ಅವರಿಗೆ ಆಮ್ಲಜನಕದ ಬೆಂಬಲ ನೀಡಲಾಗಿದೆ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದು, ಇಂದು ಅವರ ಆರೋಗ್ಯ ಮತ್ತಷ್ಟು ಬಿಗಡಾಯಿಸಿದೆ ಅಂತ ಹೇಳಲಾಗಿತ್ತು. ಸದ್ಯ ಇದೀಗ ಚಿಕಿತ್ಸೆ ಫಲಕಾರಿಯಾಗದೇ ಅವರು ಆಸ್ಪತ್ರೆಯಲ್ಲಿಯೇ ಕೊನೆಯುಸಿರೆಳೆದಿದ್ದಾರೆ.

1942 `ಭಾರತ ಬಿಟ್ಟು ತೊಲಗಿ ಚಳುವಳಿ’ಯಲ್ಲಿ ರಾಜಕಾರಣಕ್ಕೆ ಪ್ರವೇಶಿಸಿದ್ದ ವಾಜಪೇಯಿ ಅವರು 1991, 1996, 1998, 1999 ಹಾಗೂ 2004ರಲ್ಲಿ ಲಕ್ನೋ ಲೋಕಸಭಾ ಕ್ಷೇತ್ರದಿಂದ ಸತತವಾಗಿ ಆಯ್ಕೆ ಆಗಿದ್ದರು. ವಿಶ್ವಸಂಸ್ಥೆಯ ಸಾಮಾನ್ಯ ಸಭೆಯಲ್ಲಿ ಹಿಂದಿಯಲ್ಲಿ ಭಾಷಣ ಮಾಡಿದ ಮೊದಲ ವಿದೇಶಾಂಗ ವ್ಯವಹಾರಗಳ ಸಚಿವ ಎನ್ನುವ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ.

ನಿಮ್ಮ ಅಭಿಪ್ರಾಯ ತಿಳಿಸಿ

Your email address will not be published. Required fields are marked *