ಕೊಡಗು ಮೂಲದ ಕಾಲೇಜು ವಿದ್ಯಾರ್ಥಿನಿ ನೇಣುಬಿಗಿದು ಆತ್ಮಹತ್ಯೆ

Posted on: September 25, 2018

20180925_001221

ಪುತ್ತೂರು : ಕಾಲೇಜು ವಿದ್ಯಾರ್ಥಿನಿಯೋರ್ವಳು ಹಾಸ್ಟೆಲ್ ನಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಸೋಮವಾರದಂದು ನರಿಮೊಗರಿನಲ್ಲಿ ನಡೆದಿದೆ.

ಆತ್ಮಹತ್ಯೆ ಮಾಡಿಕೊಂಡ ಯುವತಿ ಮೂಲತಃ ಕೊಡಗು ಜಿಲ್ಲೆಯ ಸೋಮವಾರಪೇಟೆಯ ತಣ್ಣೀರುಹಳ್ಳ ನಿವಾಸಿ ಅಣ್ಣಪ್ಪ ಎಂಬವರ ಪುತ್ರಿ ಪುತ್ತೂರು ಕೊಂಬೆಟ್ಟು ಸರ್ಕಾರಿ ಪದವಿಪೂರ್ವ ಕಾಲೇಜಿನ ದ್ವಿತೀಯ ಪಿಯುಸಿ ವಿದ್ಯಾರ್ಥಿನಿ ಜೀವಿತಾ(17) ಎಂದು ಗುರುತಿಸಲಾಗಿದೆ.

ನರಿಮೊಗರು ಹಿಂದುಳಿದ ವರ್ಗಗಳ ವಿದ್ಯಾರ್ಥಿ ನಿಲಯದಲ್ಲಿ ವಾಸ್ತವ್ಯವಿದ್ದ ಈಕೆ ಕಾಲೇಜಿನಿಂದ ವಸತಿ ನಿಲಯಕ್ಕೆ ಆಗಮಿಸಿ ಹಾಸ್ಟೆಲ್ ಕೊಠಡಿಯ ಫ್ಯಾನಿಗೆ ಹಗ್ಗದಿಂದ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಸ್ಥಳಕ್ಕೆ ಭೇಟಿ ನೀಡಿರುವ ಪುತ್ತೂರು ಪೊಲೀಸರು ಪ್ರಕರಣ ದಾಖಲಿಸಿಕೊಂಡು ಮುಂದಿನ ಕ್ರಮಕೈಗೊಂಡಿದ್ದಾರೆ.

ನಿಮ್ಮ ಅಭಿಪ್ರಾಯ ತಿಳಿಸಿ

Your email address will not be published. Required fields are marked *