ಗೌರಿ ಗಣೇಶ ಹಬ್ಬದ ಪ್ರಯುಕ್ತ ಸಂತ್ರಸ್ತರಿಗೆ ಹೊಸ ವಸ್ತ್ರ ವಿತರಣೆ

Posted on: September 12, 2018

IMG_1092
ಮಡಿಕೇರಿ : ಪ್ರಕೃತಿ ವಿಕೋಪದಿಂದ ಸಂತ್ರಸ್ತರಾದ ನಿರಾಶ್ರಿತರಿಗೆ ಗೌರಿ ಗಣೇಶ ಹಬ್ಬದ ಪ್ರಯುಕ್ತ  ನಗರದ ಮೈತ್ರಿ ಭವನದಲ್ಲಿನ ಸಂತ್ರಸ್ತ ಕುಟುಂಬಗಳಿಗೆ ಜಿಲ್ಲಾ ಉಸ್ತುವಾರಿ ಸಚಿವರಾದ ಸಾ.ರಾ ಮಹೇಶ್ ಅವರು ಹೊಸ ವಸ್ತ್ರ ವಿತರಿಸಿದರು.

ಪುರುಷರಿಗೆ ಪ್ಯಾಂಟ್, ಶರ್ಟ್, ಮಹಿಳೆಯರಿಗೆ ಸೀರೆ ಹಾಗೂ ಮಕ್ಕಳಿಗೆ ಬಟ್ಟೆ ಸೇರಿದಂತೆ ಎಲ್ಲಾ ಸಂತ್ರಸ್ತರಿಗೂ ಹೊಸ ಹೊಸ ವಸ್ತ್ರ ನೀಡಿದರು. ಸಂತ್ರಸ್ತರೊಂದಿಗೆ ಊಟ ಮಾಡಿದ ಸಚಿವರು ಅವರ ಯೋಗ ಕ್ಷೇಮ ವಿಚಾರಿಸಿದರು.

IMG_1063

ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ರಾಜ್ಯದ ಜನರು ಸಂತೋಷದಿಂದ ಗೌರಿ ಗಣೇಶ ಹಬ್ಬವನ್ನು ಆಚರಣೆ ಮಾಡುತ್ತಿದ್ದಾರೆ. ಆದರೆ ಜಿಲ್ಲೆಯಲ್ಲಿ ಪ್ರಕೃತಿ ವಿಕೋಪದಿಂದಾಗಿ ಮನೆ ಮಠಗಳನ್ನು ಕಳೆದುಕೊಂಡು ಜನರು ನಿರಾಶ್ರಿತರಾಗಿದ್ದಾರೆ. ಇಂತಹ ಸಂದರ್ಭದಲ್ಲಿ ಸರ್ಕಾರ ಸಂತ್ರಸ್ತರ ಜೊತೆಯಲ್ಲಿದ್ದು, ಸರ್ಕಾರದ ವತಿಯಿಂದ ನೆರವನ್ನು ನೀಡಲಾಗುತ್ತಿದೆ. ಅವರಿಗೆ ಶಾಶ್ವತವಾಗಿ ಪರಿಹಾರ ಕಲ್ಪಿಸುವವರೆಗೂ ಜಿಲ್ಲೆಯ ಸಂತ್ರಸ್ತರೊಂದಿಗೆ ಸರ್ಕಾರ ಮತ್ತು ನಾಡಿನ ಜನತೆ ಅವರ ಜೊತೆಯಲ್ಲಿದ್ದಾರೆ ಎಂದು ಹೇಳಿದರು.

ಸಂತ್ರಸ್ತರಿಗೆ ಮನೆ ನಿರ್ಮಿಸಲು ಜಿಲ್ಲೆಯ ಐದು ಪಂಚಾಯತಿ ವ್ಯಾಪ್ತಿಯಲ್ಲಿ ಜಾಗ ಗುರುತಿಸಲಾಗಿದೆ. ಸರ್ಕಾರ ಮತ್ತು ಖಾಸಗಿಯವರ ಸಹಭಾಗಿತ್ವದಲ್ಲಿ ಅಂದಾಜು 6 ಲಕ್ಷ ವೆಚ್ಚದಲ್ಲಿ ಮನೆ ನಿರ್ಮಿಸಿ ಕೊಡಲಾಗುವುದು ಎಂದು ಹೇಳಿದರು. ಈ ಸಂದರ್ಭದಲ್ಲಿ ವಿಧಾನ ಪರಿಷತ್ ಸದಸ್ಯರಾದ ವೀಣಾ ಅಚ್ಚಯ್ಯ, ಸುನೀಲ್ ಸುಬ್ರಮಣಿ ಇತರರು ಇದ್ದರು.

WhatsApp Image 2018-09-12 at 11.07.50 PM

WhatsApp Image 2018-09-12 at 11.07.50 PM (1)

WhatsApp Image 2018-09-12 at 11.07.50 PM (2)

IMG_20180912_150058

ನಿಮ್ಮ ಅಭಿಪ್ರಾಯ ತಿಳಿಸಿ

Your email address will not be published. Required fields are marked *