ನೂತನ ಉಪ ವಿಭಾಗಾಧಿಕಾರಿಯಾಗಿ ಟಿ.ಜವರೇಗೌಡ ಅಧಿಕಾರ ಸ್ವೀಕಾರ

Posted on: September 19, 2018

DSC06812
ಮಡಿಕೇರಿ : ನೂತನ ಉಪ ವಿಭಾಗಾಧಿಕಾರಿಯಾಗಿ ಟಿ.ಜವರೇಗೌಡ ಅವರು ಅಧಿಕಾರ ವಹಿಸಿಕೊಂಡಿದ್ದಾರೆ. ವರ್ಗಾವಣೆಗೊಂಡಿರುವ ಉಪ ವಿಭಾಗಾಧಿಕಾರಿ ಡಾ.ನಂಜುಂಡೇಗೌಡ ಅವರಿಂದ ಬುಧವಾರ ಅಧಿಕಾರ ಸ್ವೀಕರಿಸಿದರು.

ಟಿ.ಜವರೇಗೌಡ ಅವರು ಕೆ.ಆರ್.ನಗರ ಮತ್ತು ಟಿ.ನರಸೀಪುರದಲ್ಲಿ ತಹಶೀಲ್ದಾರರಾಗಿ, ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ, ಮಂಡ್ಯ ಜಿಲ್ಲೆಯಲ್ಲಿ ವಿಶೇಷ ಭೂ ಸ್ವಾಧೀನ ಅಧಿಕಾರಿಯಾಗಿ, ಮೈಸೂರು ಜಿಲ್ಲೆಯಲ್ಲಿ ಹಿಂದುಳಿದ ವರ್ಗ ಮತ್ತು ಅಲ್ಪಸಂಖ್ಯಾತರ ಇಲಾಖೆಯಲ್ಲಿ ಅಧಿಕಾರಿಯಾಗಿ, ಬಳಿಕ ಚಿತ್ರದುರ್ಗದಲ್ಲಿ ಉಪ ವಿಭಾಗಾಧಿಕಾರಿಯಾಗಿ, ನಂತರ ಮೈಸೂರು ಮಹಾನಗರ ಪಾಲಿಕೆಯಲ್ಲಿ ವಲಯ ಆಯುಕ್ತರಾಗಿ ಸೇವೆ ಸಲ್ಲಿಸಿದ್ದಾರೆ.

ನಿಮ್ಮ ಅಭಿಪ್ರಾಯ ತಿಳಿಸಿ

Your email address will not be published. Required fields are marked *