ಸರ್ಕಾರಿ ಸ್ವಾಮ್ಯದ ಬ್ಯಾಂಕ್ ಆಫ್ ಬರೋಡ, ದೇನಾ ಬ್ಯಾಂಕ್, ವಿಜಯಾ ಬ್ಯಾಂಕ್ ವಿಲೀನ

Posted on: September 18, 2018
file6z2z6xtcwtx1bavqhdpn
ನವದೆಹಲಿ : ಸರ್ಕಾರಿ ಸ್ವಾಮ್ಯದ ಬ್ಯಾಂಕ್ ಆಫ್ ಬರೋಡ, ದೇನಾ ಬ್ಯಾಂಕ್, ವಿಜಯಾ ಬ್ಯಾಂಕ್ ವಿಲೀನ ಪ್ರಕ್ರಿಯೆಯನ್ನು  ಹಣಕಾಸು ಸಚಿವಾಲಯ ಘೋಷಿಸಿದೆ.
 ಆರ್ಥಿಕ ಸೇವೆಗಳ ಕಾರ್ಯದರ್ಶಿ ರಾಜೀವ್ ಕುಮಾರ್ ಸೈಸ್ ಅವರು ಬ್ಯಾಂಕ್ ಗಳ ವಿಲೀನ ಘೋಷಣೆ ಮಾಡಿದ್ದು, ವಿಲೀನಗೊಂಡ ನಂತರ ಈ ಬ್ಯಾಂಕ್ ದೇಶದ ಮೂರನೇ ಅತಿದೊಡ್ಡ ಬ್ಯಾಂಕ್ ಎಂಬ ಹೆಗ್ಗಳಿಕೆಗೆ ಪಾತ್ರವಾಗಲಿದೆ.  ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿರುವ ಕೇಂದ್ರ  ವಿತ್ತ ಸಚಿವ ಅರುಣ್ ಜೇಟ್ಲಿ, ” ಬ್ಯಾಂಕ್ ಗಳ ಏಕೀಕರಣ ಬಜೆಟ್ ನಲ್ಲಿ ಘೋಷಿಸಲಾಗಿತ್ತು. ಈ ನಿಟ್ಟಿನಲ್ಲಿ ಮೊದಲ ಕ್ರಮವನ್ನು ಕೈಗೊಳ್ಳಲಾಗಿದ್ದು ಸರ್ಕಾರಿ ಸ್ವಾಮ್ಯದ ಬ್ಯಾಂಕ್ ಆಫ್ ಬರೋಡ, ದೇನಾ ಬ್ಯಾಂಕ್, ವಿಜಯಾ ಬ್ಯಾಂಕ್ ವಿಲೀನಗೊಳ್ಳಲಿದೆ ಎಂದು ಹೇಳಿದ್ದಾರೆ.

ನಿಮ್ಮ ಅಭಿಪ್ರಾಯ ತಿಳಿಸಿ

Your email address will not be published. Required fields are marked *