ಬ್ರೇಕಿಂಗ್ ನ್ಯೂಸ್
ಹೈ ಕಮಾಂಡ್ ಸೂಚಿಸಿದ ಅಭ್ಯರ್ಥಿಗಳ ಗೆಲುವಿಗೆ ಶ್ರಮಿಸಲು ಮಡಿಕೇರಿ ನಗರ ಕಾಂಗ್ರೆಸ್ ಸಮಿತಿ ಸಭೆಯಲ್ಲಿ ನಿರ್ಣಯ , ಕೇಂದ್ರದ 546 ಕೋಟಿ ರೂ. 8 ಜಿಲ್ಲೆಗಳಿಗೆ ವಿನಿಯೋಗ ಮುಖ್ಯಮಂತ್ರಿ ಕುಮಾರಸ್ವಾಮಿ , ಕೊಡಗು ಸಂತ್ರಸ್ತರಿಗೆ ಮನೆ ನಿರ್ಮಾಣಕ್ಕೆ ಗುದ್ದಲಿ ಪೂಜೆ ನೆರವೇರಿಸಿದ ಸಿಎಂ , ಅಪರಾಧ ತಡೆಗೆ ಸಾರ್ವಜನಿಕರ ಸಹಭಾಗಿತ್ವ ಅಗತ್ಯ ಕೊಡಗು ಎಸ್‍ಪಿ ಸುಮನ್ ಡಿ.ಪೆನ್ನೇಕರ್ , ಸಶಸ್ತ್ರ ಪಡೆಗಳ ಧ್ವಜ ದಿನಾಚರಣೆ , ಡಿ. 10ರಿಂದ 21ರವರೆಗೆ ವಿಧಾನ ಪರಿಷತ್ ಸದಸ್ಯೆ ವೀಣಾ ಅಚ್ಚಯ್ಯ ಅಲಭ್ಯ , ಅಯ್ಯಂಡ್ರ ರೋಹಿಣಿ ನಾಣಯ್ಯನವರ ಕುಂಚದಲ್ಲಿ ಅರಳಿದ ಭತ್ತದ ತೆನೆಗೂಡು , ಮಡಿಕೇರಿಯಲ್ಲಿ ಸ್ವಚ್ಛತಾ ಜಾಗೃತಿ ಜಾಥ ಸ್ವಚ್ಛ ಪರಿಸರ ನಿರ್ಮಾಣಕ್ಕೆ ಜಯ ಚಿಣ್ಣಪ್ಪ  ಕರೆ  , ಗೌಡ ಜನಾಂಗದ ಕ್ರಿಕೆಟ್ ಪಂದ್ಯಾಟ , ಹಳೇ ವಿದ್ಯಾರ್ಥಿಗಳಿಂದ ಕೊಡುಗೆ ,

ಸುಗ್ರೀವಾಜ್ಞೆ ಮೂಲಕ ತ್ರಿವಳಿ ತಲಾಕ್ ಮಸೂದೆ ಜಾರಿಗೆ ಕೇಂದ್ರ ನಿರ್ಧಾರ

Posted on: September 19, 2018

talaq_nnr_newsk_68056

ನವದೆಹಲಿ: ತ್ರಿವಳಿ ತಲಾಕ್​ ಮಸೂದೆಗೆ ರಾಜ್ಯಸಭೆಯಲ್ಲಿ ಅನುಮೋದನೆ ದೊರೆಯದ ಹಿನ್ನೆಲೆಯಲ್ಲಿ ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರ ಅಧ್ಯಕ್ಷತೆಯಲ್ಲಿ ನಡೆದ ಕೇಂದ್ರ ಸಚಿವ ಸಂಪುಟ ಸಭೆಯಲ್ಲಿ ತ್ರಿವಳಿ ತಲಾಕ್​​ ನಿಷೇಧ ಸುಗ್ರೀವಾಜ್ಞೆಗೆ ಒಪ್ಪಿಗೆ ನೀಡಲಾಗಿದೆ. ಈ ಮೂಲಕ ತ್ರಿವಳಿ ತಲಾಕ್​​ ಶಿಕ್ಷಾರ್ಹ ಅಪರಾಧವಾಗಲಿದೆ.

ತ್ರಿವಳಿ ತಲಾಕ್​​ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಅನುಮೋದನೆ ದೊರೆತಿತ್ತು, ಆದರೆ, ರಾಜ್ಯಸಭೆಯಲ್ಲಿ ಅನುಮೋದನೆ ದೊರೆತಿರಲಿಲ್ಲ. ಇದರಿಂದಾಗಿ ತ್ರಿವಳಿ ತಲಾಕ್​ ತಿದ್ದುಪಡಿ ಮಸೂದೆ ಕಾಯ್ದೆಯಾಗಿ ಜಾರಿಗೆ ಬರಲು ಸಾಧ್ಯವಾಗಿರಲಿಲ್ಲ.

ಆಗಸ್ಟ್​ನಲ್ಲಿ ಕೇಂದ್ರ ಸರ್ಕಾರ ತ್ರಿವಳಿ ತಲಾಕ್​ ಮಸೂದೆಗೆ 3 ತಿದ್ದುಪಡಿಗಳನ್ನು ತಂದಿತ್ತು. ಪ್ರಸ್ತಾವಿತ ತಿದ್ದುಪಡಿ ಪ್ರಕಾರ, ತ್ರಿವಳಿ ತಲಾಕ್ ಜಾಮೀನು ರಹಿತ ಅಪರಾಧವಾಗಿಯೇ ಮುಂದುವರಿಯಲಿದೆ. ಆದರೆ, ಪತ್ನಿಯ ಅಭಿಪ್ರಾಯ ಪಡೆದು ನ್ಯಾಯಾಧೀಶರು ಜಾಮೀನು ನೀಡಬಹುದು. ಮಕ್ಕಳನ್ನು ತನ್ನ ವಶಕ್ಕೆ ನೀಡುವಂತೆ ತಾಯಿ ಅರ್ಜಿ ಹಾಕಬಹುದು.

ತ್ರಿವಳಿ ತಲಾಕ್ ದೂರನ್ನು ಆರೋಪಿಯ ಪತ್ನಿ ಅಥವಾ ಆಕೆಯ ರಕ್ತ ಸಂಬಂಧಿಗಳು ಮಾತ್ರ ನೀಡಬಹುದಾಗಿದೆ. ಜತೆಗೆ ಎಫ್​ಐಆರ್ ದಾಖಲಿಸಿ ಆರೋಪಿಯನ್ನು ತಕ್ಷಣ ಬಂಧಿಸಬೇಕೆಂದಿಲ್ಲ ಎಂಬ ಅಂಶಗಳನ್ನು ಮಸೂದೆಯಲ್ಲಿ ಸೇರಿಸಲಾಗಿದೆ.

ಸುಗ್ರೀವಾಜ್ಞೆಗೆ 6 ತಿಂಗಳೊಳಗೆ ಸಂಸತ್ತಿನಲ್ಲಿ ಅನುಮೋದನೆ ಪಡೆಯಬೇಕು. ಹಾಗಾಗಿ ಕೇಂದ್ರ ಸರ್ಕಾರ ಚಳಿಗಾಲದ ಅಧಿವೇಶನದಲ್ಲಿ ತ್ರಿವಳಿ ತಲಾಕ್​ ಮಸೂದೆಯನ್ನು ಮಂಡಿಸಲಿದೆ.

ನಿಮ್ಮ ಅಭಿಪ್ರಾಯ ತಿಳಿಸಿ

Your email address will not be published. Required fields are marked *