ಬ್ರೇಕಿಂಗ್ ನ್ಯೂಸ್
ಹೈ ಕಮಾಂಡ್ ಸೂಚಿಸಿದ ಅಭ್ಯರ್ಥಿಗಳ ಗೆಲುವಿಗೆ ಶ್ರಮಿಸಲು ಮಡಿಕೇರಿ ನಗರ ಕಾಂಗ್ರೆಸ್ ಸಮಿತಿ ಸಭೆಯಲ್ಲಿ ನಿರ್ಣಯ , ಕೇಂದ್ರದ 546 ಕೋಟಿ ರೂ. 8 ಜಿಲ್ಲೆಗಳಿಗೆ ವಿನಿಯೋಗ ಮುಖ್ಯಮಂತ್ರಿ ಕುಮಾರಸ್ವಾಮಿ , ಕೊಡಗು ಸಂತ್ರಸ್ತರಿಗೆ ಮನೆ ನಿರ್ಮಾಣಕ್ಕೆ ಗುದ್ದಲಿ ಪೂಜೆ ನೆರವೇರಿಸಿದ ಸಿಎಂ , ಅಪರಾಧ ತಡೆಗೆ ಸಾರ್ವಜನಿಕರ ಸಹಭಾಗಿತ್ವ ಅಗತ್ಯ ಕೊಡಗು ಎಸ್‍ಪಿ ಸುಮನ್ ಡಿ.ಪೆನ್ನೇಕರ್ , ಸಶಸ್ತ್ರ ಪಡೆಗಳ ಧ್ವಜ ದಿನಾಚರಣೆ , ಡಿ. 10ರಿಂದ 21ರವರೆಗೆ ವಿಧಾನ ಪರಿಷತ್ ಸದಸ್ಯೆ ವೀಣಾ ಅಚ್ಚಯ್ಯ ಅಲಭ್ಯ , ಅಯ್ಯಂಡ್ರ ರೋಹಿಣಿ ನಾಣಯ್ಯನವರ ಕುಂಚದಲ್ಲಿ ಅರಳಿದ ಭತ್ತದ ತೆನೆಗೂಡು , ಮಡಿಕೇರಿಯಲ್ಲಿ ಸ್ವಚ್ಛತಾ ಜಾಗೃತಿ ಜಾಥ ಸ್ವಚ್ಛ ಪರಿಸರ ನಿರ್ಮಾಣಕ್ಕೆ ಜಯ ಚಿಣ್ಣಪ್ಪ  ಕರೆ  , ಗೌಡ ಜನಾಂಗದ ಕ್ರಿಕೆಟ್ ಪಂದ್ಯಾಟ , ಹಳೇ ವಿದ್ಯಾರ್ಥಿಗಳಿಂದ ಕೊಡುಗೆ ,

ಅಕ್ರಮ ಗೂಬೆ ಮಾರಾಟಕ್ಕೆ ಯತ್ನ ಇಬ್ಬರ ಬಂಧನ

Posted on: October 23, 2018

645a8db4-6771-453d-95d0-b99635188fd8
ಮಡಿಕೇರಿ : ಅಕ್ರಮವಾಗಿ ಗೂಬೆ ಮಾರಾಟ ಮಾಡಲು ಯೆತ್ನಿಸಿದ ಇಬ್ಬರು ಆರೋಪಿಗಳನ್ನು ಮೈಸೂರಿನ ಅರಣ್ಯ ಸಂಚಾರಿ ದಳ ಬಂಧಿಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ.

ಮೂಲತಃ ವಿರಾಜಪೇಟೆ ತಾಲೂಕಿನ ಬಿಳಗುಂದ ಗ್ರಾಮದ ಬಿ.ಎ ರವೀಶ್ ರಾವ್ ಹಾಗು ಮಂಡ್ಯ ಜಿಲ್ಲೆಯ ನಾಗಮಂಗಲ ತಾಲೂಕಿನ ಎಸ್ ಆರ್ ಶ್ರೀಧರ್ ಬಂಧಿತ ಆರೋಪಿಗಳು. ನಿನ್ನೆ ದಿನ ನೀಲಿ ಬಣ್ಣದ ನ್ಯಾನೋ ಕಾರಿನಲ್ಲಿ ಮೈಸೂರಿನ ಕಂಟ್ರಿ ಕ್ಲಬ್ ಬಳಿ ಶ್ರೀರಂಗಪಟ್ಟಣದಿಂದ ಮೈಸೂರು ಕಡೆಗೆ ಗೂಬೆಯೊಂದಿಗೆ ಬರುತ್ತಿದ್ದಾಗ ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿದ ಮೈಸೂರು ಅರಣ್ಯ ಸಂಚಾರಿ ದಳದ ಉಪ ಅರಣ್ಯಾಧಿಕಾರಿ ಶಿವಯ್ಯ ನೇತೃತ್ವದ ತಂಡ ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದೆ.

ಬಂಧಿತರಿಂದ ಒಂದು ಗೂಬೆ ಹಾಗೂ ಕೆ.ಎ -೧೨-ಝಡ್ -೨೬೮೦ ನೋಂದಣಿ ಸಂಖ್ಯೆಯ ಕಾರನ್ನು ವಶಪಡಿಸಿಕೊಂಡು ಅರಣ್ಯ ಸಂರಕ್ಷಣಾ ಕಾಯ್ದೆ ೧೯೭೨ ರ್ ಕಲಾಂ ೨(೧೬). ೯, ೩೯, ೪೪, ೪೮,೫೧ ರಾಡಿಯಲ್ಲಿ ಪ್ರಕರಣ ದಾಖಲಿಸಿಕೊಂಡು ಮುಂದಿನ ಕ್ರಮ ಕೈಗೊಂಡಿದ್ದಾರೆ.

ಕಾರ್ಯಾಚರಣೆಯಲ್ಲಿ ಉಪ ಅರಣ್ಯಾಧಿಕಾರಿ ಹೆಚ್.ಎಸ್ ಮಹೇಶ್, ರವೀಂದ್ರನ್, ಶರಣಪ್ಪ, ಪ್ರಕಾಶ, ಮಧುಸೂದನ್, ಚಾಲಕ ಮಧು ಪಾಲ್ಗೊಂಡಿದ್ದರು.

ನಿಮ್ಮ ಅಭಿಪ್ರಾಯ ತಿಳಿಸಿ

Your email address will not be published. Required fields are marked *