ಬ್ರೇಕಿಂಗ್ ನ್ಯೂಸ್
ಹೈ ಕಮಾಂಡ್ ಸೂಚಿಸಿದ ಅಭ್ಯರ್ಥಿಗಳ ಗೆಲುವಿಗೆ ಶ್ರಮಿಸಲು ಮಡಿಕೇರಿ ನಗರ ಕಾಂಗ್ರೆಸ್ ಸಮಿತಿ ಸಭೆಯಲ್ಲಿ ನಿರ್ಣಯ , ಕೇಂದ್ರದ 546 ಕೋಟಿ ರೂ. 8 ಜಿಲ್ಲೆಗಳಿಗೆ ವಿನಿಯೋಗ ಮುಖ್ಯಮಂತ್ರಿ ಕುಮಾರಸ್ವಾಮಿ , ಕೊಡಗು ಸಂತ್ರಸ್ತರಿಗೆ ಮನೆ ನಿರ್ಮಾಣಕ್ಕೆ ಗುದ್ದಲಿ ಪೂಜೆ ನೆರವೇರಿಸಿದ ಸಿಎಂ , ಅಪರಾಧ ತಡೆಗೆ ಸಾರ್ವಜನಿಕರ ಸಹಭಾಗಿತ್ವ ಅಗತ್ಯ ಕೊಡಗು ಎಸ್‍ಪಿ ಸುಮನ್ ಡಿ.ಪೆನ್ನೇಕರ್ , ಸಶಸ್ತ್ರ ಪಡೆಗಳ ಧ್ವಜ ದಿನಾಚರಣೆ , ಡಿ. 10ರಿಂದ 21ರವರೆಗೆ ವಿಧಾನ ಪರಿಷತ್ ಸದಸ್ಯೆ ವೀಣಾ ಅಚ್ಚಯ್ಯ ಅಲಭ್ಯ , ಅಯ್ಯಂಡ್ರ ರೋಹಿಣಿ ನಾಣಯ್ಯನವರ ಕುಂಚದಲ್ಲಿ ಅರಳಿದ ಭತ್ತದ ತೆನೆಗೂಡು , ಮಡಿಕೇರಿಯಲ್ಲಿ ಸ್ವಚ್ಛತಾ ಜಾಗೃತಿ ಜಾಥ ಸ್ವಚ್ಛ ಪರಿಸರ ನಿರ್ಮಾಣಕ್ಕೆ ಜಯ ಚಿಣ್ಣಪ್ಪ  ಕರೆ  , ಗೌಡ ಜನಾಂಗದ ಕ್ರಿಕೆಟ್ ಪಂದ್ಯಾಟ , ಹಳೇ ವಿದ್ಯಾರ್ಥಿಗಳಿಂದ ಕೊಡುಗೆ ,

ಕೊಡಗಿನಲ್ಲಿ ಭಾರಿ ಮಳೆ ಮತ್ತೆ ಜನರಲ್ಲಿ ಆತಂಕ

Posted on: October 8, 2018

349024

ಮಡಿಕೇರಿ: ಉರಿ ಬಿಸಿಲು ಮತ್ತು ಕಾರ್ಮೊಡಗಳ ಕಣ್ಣಾಮುಚ್ಚಾಲೆಯಾಟಕ್ಕೆ ತೆರೆ ಬಿದ್ದಿದ್ದು , ಜಿಲ್ಲಾ ಕೇಂದ್ರ ಮಡಿಕೇರಿ ಸೇರಿದಂತೆ ಸುತ್ತಮುತ್ತಲ ಪ್ರದೇಶಗಳಲ್ಲಿ ಸಾಧಾರಣದಿಂದ ಭಾರೀ ಮಳೆಯಾಗಿದೆ.

ಕೊಡಗು ಸೇರಿದಂತೆ ವಿವಿಧೆಡೆ ಅ.8 ರಿಂದ ಧಾರಾಕಾರ ಮಳೆಯಾಗಬಹುದೆನ್ನುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿತ್ತಾದರೂ ಮೋಡ ಕವಿದ ವಾತಾವರಣದೊಂದಿಗೆ ಇಂದು ಸಾಧಾರಣ ಮಳೆಯಾಗಿದೆ.

ಜಿಲ್ಲಾ ಕೇಂದ್ರ ಮಡಿಕೇರಿಯಲ್ಲಿ ಮಧ್ಯಾಹ್ನ 3 ರಿಂದ ಆರಂಭಗೊಂಡ ಮಳೆ ಮುಕ್ಕಾಲು ಗಂಟೆಗಳ ಕಾಲ ಉತ್ತಮವಾಗಿ ಸುರಿಯಿತು. ಇದರಿಂದ ಗುಂಡಿಗಳನ್ನು ಹೊದ್ದು ಮಲಗಿರುವ ನಗರದ ರಸ್ತೆಗಳಲ್ಲಿ ಮಳೆನೀರು ಹರಿದು ವಾಹನಗಳ ಸಂಚಾರಕ್ಕೆ ತೊಡಕುಂಟಾಯಿತು. ನಗರದ ಖಾಸಗಿ ಬಸ್ ನಿಲ್ದಾಣ ಇತ್ತೀಚೆಗೆ ಪ್ರಾಕೃತಿಕ ವಿಕೋಪಕ್ಕೆ ಸಿಲುಕಿ ಹಾನಿಗೀಡಾಗಿರುವುದರಿಂದ ಮಳೆ ಸಂದರ್ಭ ಆಶ್ರಯ ಪಡೆಯಲು ಸೂಕ್ತ ವ್ಯವಸ್ಥೆಗಳಿಲ್ಲದೆ ಪ್ರಯಾಣಿಕರು ಪರದಾಡುವಂತ್ತಾಯಿತು.

ಜಿಲ್ಲೆಯ ಇತರ ಭಾಗಗಳಲ್ಲೂ ಸಾಧಾರಣ ಮಳೆಯಾಗಿದೆ. ಮುಂದಿನ ಮೂರು ದಿನಗಳ ಕಾಲ ಮಳೆಯಾಗಬಹುದೆಂದು ಅಧಿಕಾರಿಗಳು ತಿಳಿಸಿದ್ದಾರೆ. ಮಡಿಕೇರಿಯಲ್ಲಿ ಮೋಡ ಕವಿದ ವಾತಾವರಣ ಮುಂದುವರೆದಿದೆ.

ನಿಮ್ಮ ಅಭಿಪ್ರಾಯ ತಿಳಿಸಿ

Your email address will not be published. Required fields are marked *