ಕೊಡಗು ದಸರಾ ಮದ್ಯ ಮಾರಾಟ ನಿಷೇಧ

Posted on: October 15, 2018

liquorban
ಮಡಿಕೇರಿ : ಮಡಿಕೇರಿ ನಗರ ಮತ್ತು ಗೋಣಿಕೊಪ್ಪದಲ್ಲಿ ಅಕ್ಟೋಬರ್, 18 ರಂದು ಆಯುಧ ಪೂಜೆ ಹಾಗೂ ಅಕ್ಟೋಬರ್, 19 ರಂದು ದಸರಾ ಕಾರ್ಯಕ್ರಮದ ಸಂಬಂಧ ಕಾನೂನು ಸುವ್ಯವಸ್ಥೆಯನ್ನು ಕಾಪಾಡುವ ಸಲುವಾಗಿ ಹಾಗೂ ಕಾರ್ಯಕ್ರಮವು ಶಾಂತಿಯುತವಾಗಿ ನಡೆಯಲು ಅನುವಾಗುವಂತೆ ಅಬಕಾರಿ ಕಾಯ್ದೆ 1965ರ ಕಲಂ 21 ರಲ್ಲಿ ದತ್ತವಾದ ಅಧಿಕಾರದಂತೆ ಅಕ್ಟೋಬರ್, 17 ರ ಮಧ್ಯರಾತ್ರಿಯಿಂದ ಅಕ್ಟೋಬರ್, 20ರ ಬೆಳಗ್ಗೆ 10 ಗಂಟೆಯವರೆಗೆ ಮಡಿಕೇರಿ ನಗರ ಠಾಣಾ ಸರಹದ್ದಿನ 10 ಕಿ.ಮಿ. ವ್ಯಾಪ್ತಿಯಲ್ಲಿ ಹಾಗೂ ಅಕ್ಟೋಬರ್, 18 ರ ಮಧ್ಯರಾತ್ರಿ 12 ಗಂಟೆಯಿಂದ ಅಕ್ಟೋಬರ್, 20ರ ಬೆಳಗ್ಗೆ 10 ಗಂಟೆಯವರೆಗೆ ಗೋಣಿಕೊಪ್ಪ ಪಟ್ಟಣ ಹಾಗೂ ಗೋಣಿಕೊಪ್ಪದ 10 ಕಿ.ಮೀ ವ್ಯಾಪ್ತಿಯಲ್ಲಿ ಬರುವ ಎಲ್ಲಾ ಗ್ರಾಮಗಳಲ್ಲಿರುವ ಎಲ್ಲಾ ರೀತಿಯ ಅಂಗಡಿ, ಬಾರ್  ಹಾಗೂ ರೆಸ್ಟೋರೆಂಟ್, ಕ್ಲಬ್, ಹೋಟೆಲ್ ಮುಂತಾದವುಗಳಲ್ಲಿ ಎಲ್ಲಾ ವಿಧದ ಮದ್ಯ ಮಾರಾಟವನ್ನು ಸಂಪೂರ್ಣವಾಗಿ ನಿಷೇಧಿಸಿ  ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ದಂಡಾಧಿಕಾರಿ ಪಿ.ಐ.ಶ್ರೀವಿದ್ಯಾ ಅವರು ಆದೇಶ ಹೊರಡಿಸಿದ್ದಾರೆ.

ನಿಮ್ಮ ಅಭಿಪ್ರಾಯ ತಿಳಿಸಿ

Your email address will not be published. Required fields are marked *