ಗೌಡ ವಿದ್ಯಾರ್ಥಿಗಳಿಗೆ ವಿವಿಧ ಸ್ಪರ್ಧೆ

Posted on: October 11, 2018

WhatsApp Image 2018-10-11 at 10.50.25 PM

ಮಡಿಕೇರಿ :  ಗೌಡ ಜನಾಂಗದ ವಿದ್ಯಾರ್ಥಿಗಳಿಗೆ ವಿವಿಧ ಸ್ಪರ್ಧೆಗಳನ್ನು ಅ.24 ರಂದು ಏರ್ಪಡಿಸಲಾಗಿದೆ ಎಂದು ಗೌಡ ವಿದ್ಯಾಸಂಘದ ಅಧ್ಯಕ್ಷ ಹೊಸೂರು ರಮೇಶ್ ಜೋಯಪ್ಪ ತಿಳಿಸಿದ್ದಾರೆ.

ನಗರದ ಸುದ್ದಿಗೋಷ್ಠಿಯಲ್ಲಿ ಈಕುರಿತು ಮಾತನಾಡಿದ ಅವರು ವಿದ್ಯಾರ್ಥಿಗಳನ್ನು ಪ್ರೋತ್ಸಾಹಿಸುವ ದೃಷ್ಟಿಯಿಂದ ಪ್ರತಿ ವರ್ಷ ಆಗಸ್ಟ್ ತಿಂಗಳಿನಲ್ಲಿ ನಡೆಸಲಾಗುತ್ತಿದ್ದ ಸ್ಪರ್ಧಾ ಕಾರ್ಯಕ್ರಮವನ್ನು ಇತ್ತೀಚೆಗೆ ಕೊಡಗಿನಲ್ಲಿ ಸಂಭವಿಸಿದ ಪ್ರಕೃತಿ ವಿಕೋಪದ ಹಿನ್ನೆಲೆಯಲ್ಲಿ ಈ ಬಾರಿ ಮುಂದುಡಲಾಗಿತ್ತು. ಅದರಂತೆ ಅಕ್ಟೋಬರ್ 24ರ ಬುಧವಾರದಂದು ಮಡಿಕೇರಿಯ ಗೌಡ ವಿದ್ಯಾಸಂಘದ ಸಭಾಂಗಣದಲ್ಲಿ ವಿವಿಧ ಸ್ಪರ್ಧೆಗಳನ್ನು ಏರ್ಪಡಿಸಲಾಗಿದೆ.

ಎಲ್‍ಕೆಜಿಯಿಂದ 1ನೇ ತರಗತಿಯವರೆಗಿನ ಮಕ್ಕಳಿಗೆ ಛದ್ಮವೇಷ, 2ನೇ ತರಗತಿಯಿಂದ 4ನೇ ತರಗತಿಯವರೆಗಿನ ಮಕ್ಕಳಿಗೆ ಚಿತ್ರಕಲೆ, 5ರಿಂದ 7ನೇ ತರಗತಿವರೆಗಿನ ಮಕ್ಕಳಿಗೆ ಸಾಮಾನ್ಯ ಜ್ಞಾನ, 8ರಿಂದ 10ನೇ ತರಗತಿವರಗಿನ ಮಕ್ಕಳಿಗೆ ಜನಪದ ನೃತ್ಯ(ಸೋಲೊ) 5.ನಿಮಿಷ ಕಾಲಾವಕಾಶ, ಪಿಯುಸಿ ಮೇಲ್ಪಟ್ಟ ವಿದ್ಯಾರ್ಥಿಗಳಿಗೆ ಸೋಬಾನೆ ಹಾಡು (ಕಾಲಾವಕಾಶ 03 ನಿಮಿಷ) ಸ್ಪರ್ಧೆಗಳನ್ನು ಹಮ್ಮಿಕೊಳ್ಳಲಾಗಿದ್ದು, ಆಸಕ್ತರು ದಿನಾಂಕ 24-10-2018ರಂದು ಬೆಳಗ್ಗೆ 9 ಗಂಟೆಯೊಳಗೆ ತಮ್ಮ ಹೆಸರನ್ನು ನೋಂದಾಯಿಸಿಕೊಳ್ಳಬೇಕೆಂದ ಅವರು ಸ್ಪರ್ಧೆಗಾಘಿ ಆಗಮಿಸುವ ವಿದ್ಯಾರ್ಥಿಗಳಿಗೆ ಪ್ರಯಾಣ ಭತ್ಯೆ ಮತ್ತು ಮಧ್ಯಾಹ್ನ ಊಟಡ ವ್ಯವಸ್ಥೆಯನ್ನು ಏರ್ಪಡಿಸಲಾಗಿದೆ ಎಂದು ಹೇಳೀದರು.

ಸುದ್ದಿಗೋಷ್ಠಿಯಲ್ಲಿ ಉಪಾಧ್ಯಕ್ಷ ಅಂಬೆಕಲ್ಲ ನವೀನ್ ಕುಶಾಲಪ್ಪ, ಕೊಟ್ಟಕೇರಿಯನ ಡಿ.ದಯಾನಂದ, ಸಹಕಾರ್ಯದರ್ಶಿ ತಳೂರು ಕೆ.ದಿನೇಶ್ ಕುಮಾರ್, ಖಜಾಂಚಿ ಕಟ್ಟೆಮನೆ ಸೋನಾ ಮತ್ತು ಕೀರ್ತಿ ಕುಮಾರ್ ಇದ್ದರು.

ನಿಮ್ಮ ಅಭಿಪ್ರಾಯ ತಿಳಿಸಿ

Your email address will not be published. Required fields are marked *