ಬ್ರೇಕಿಂಗ್ ನ್ಯೂಸ್
ಹೈ ಕಮಾಂಡ್ ಸೂಚಿಸಿದ ಅಭ್ಯರ್ಥಿಗಳ ಗೆಲುವಿಗೆ ಶ್ರಮಿಸಲು ಮಡಿಕೇರಿ ನಗರ ಕಾಂಗ್ರೆಸ್ ಸಮಿತಿ ಸಭೆಯಲ್ಲಿ ನಿರ್ಣಯ , ಕೇಂದ್ರದ 546 ಕೋಟಿ ರೂ. 8 ಜಿಲ್ಲೆಗಳಿಗೆ ವಿನಿಯೋಗ ಮುಖ್ಯಮಂತ್ರಿ ಕುಮಾರಸ್ವಾಮಿ , ಕೊಡಗು ಸಂತ್ರಸ್ತರಿಗೆ ಮನೆ ನಿರ್ಮಾಣಕ್ಕೆ ಗುದ್ದಲಿ ಪೂಜೆ ನೆರವೇರಿಸಿದ ಸಿಎಂ , ಅಪರಾಧ ತಡೆಗೆ ಸಾರ್ವಜನಿಕರ ಸಹಭಾಗಿತ್ವ ಅಗತ್ಯ ಕೊಡಗು ಎಸ್‍ಪಿ ಸುಮನ್ ಡಿ.ಪೆನ್ನೇಕರ್ , ಸಶಸ್ತ್ರ ಪಡೆಗಳ ಧ್ವಜ ದಿನಾಚರಣೆ , ಡಿ. 10ರಿಂದ 21ರವರೆಗೆ ವಿಧಾನ ಪರಿಷತ್ ಸದಸ್ಯೆ ವೀಣಾ ಅಚ್ಚಯ್ಯ ಅಲಭ್ಯ , ಅಯ್ಯಂಡ್ರ ರೋಹಿಣಿ ನಾಣಯ್ಯನವರ ಕುಂಚದಲ್ಲಿ ಅರಳಿದ ಭತ್ತದ ತೆನೆಗೂಡು , ಮಡಿಕೇರಿಯಲ್ಲಿ ಸ್ವಚ್ಛತಾ ಜಾಗೃತಿ ಜಾಥ ಸ್ವಚ್ಛ ಪರಿಸರ ನಿರ್ಮಾಣಕ್ಕೆ ಜಯ ಚಿಣ್ಣಪ್ಪ  ಕರೆ  , ಗೌಡ ಜನಾಂಗದ ಕ್ರಿಕೆಟ್ ಪಂದ್ಯಾಟ , ಹಳೇ ವಿದ್ಯಾರ್ಥಿಗಳಿಂದ ಕೊಡುಗೆ ,

ಜಿಂಕೆ ಬೇಟೆ ಮೂವರು ಆರೋಪಿಗಳ ಬಂಧನ

Posted on: October 23, 2018

2bc2f79c-ef9d-44ec-9d9c-ef5303348b00

ಮಡಿಕೇರಿ: ಮೀಸಲು ಅರಣ್ಯ ವ್ಯಾಪ್ತಿಯಲ್ಲಿ ಅಕ್ರಮವಾಗಿ ಜಿಂಕೆಯನ್ನು ಬೇಟೆಯಾಡಿ ಮಾಂಸ ಮಾಡುತ್ತಿದ್ದ ಆರೋಪಿಗಳನ್ನು ಸೆರೆ ಹಿಡಿಯುವಲ್ಲಿ ಅರಣ್ಯ ಇಲಾಖಾಧಿಕಾರಿಗಳು ಯಶಸ್ವಿಯಾಗಿದ್ದಾರೆ.

ಸಿದ್ದಾಪುರ ಗ್ರಾ.ಪಂ. ವ್ಯಾಪ್ತಿಯ ಅವರೆಗುಂದ ಹಾಡಿಯ ನಿವಾಸಿಗಳಾದ ರಮೇಶ್, ಚಂದ್ರ, ವೆಂಕಟೇಶ ಕುಶಾಲನಗರ ಮೀಸಲು ಅರಣ್ಯವ್ಯಾಪ್ತಿಯಲ್ಲಿ ಅಕ್ರಮವಾಗಿ ಜಿಂಕೆಯನ್ನು ಬೇಟೆಯಾಡಿ ಮಾಂಸ ಮಾಡುತ್ತಿದ್ದರು. ಈ ಸಂದರ್ಭ ಖಚಿತ ಮಾಹಿತಿ ಮೇರೆಗೆ ವಲಯ ಅರಣ್ಯಾಧಿಕಾರಿ ಅರುಣ್ ಮಾರ್ಗದರ್ಶನದಲ್ಲಿ, ಉಪವಲಯ ಅರಣ್ಯಾಧಿಕಾರಿ ಮಂಜುನಾಥ್ ಗೂಳಿ ನೇತೃತ್ವದಲ್ಲಿ ದಾಳಿ ನಡೆಸಿದ ಅಧಿಕಾರಿಗಳು, ಜಿಂಕೆಯ ಮಾಂಸ ಹಾಗೂ ಚರ್ಮ ಸಹಿತ ಮೂವರು ಆರೋಪಿಗಳನ್ನು ವಶಕ್ಕೆ ಪಡೆದು ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಕಾರ್ಯಾಚರಣೆಯಲ್ಲಿ ಅರಣ್ಯ ರಕ್ಷಕ ಕೆ.ಎಂ. ಚರಣ್, ಅರಣ್ಯ ವೀಕ್ಷಕ ಅಶೋಕ ಮೇಲಿನಮನಿ ಹಾಗೂ ಅರಣ್ಯ ಕಳ್ಳ ಬೇಟೆ ಶಿಬಿರದ ಸಿಬ್ಬಂದಿಗಳಾದ ಪ್ರವೀಣ್, ರಾಜೇಶ್, ಚಂದ್ರ, ರಾಜಪ್ಪ, ರಾಚ, ದಿಲೀಪ್ ಪಾಲ್ಗೊಂಡಿದ್ದರು.

ನಿಮ್ಮ ಅಭಿಪ್ರಾಯ ತಿಳಿಸಿ

Your email address will not be published. Required fields are marked *