ಬ್ರೇಕಿಂಗ್ ನ್ಯೂಸ್
ಹೈ ಕಮಾಂಡ್ ಸೂಚಿಸಿದ ಅಭ್ಯರ್ಥಿಗಳ ಗೆಲುವಿಗೆ ಶ್ರಮಿಸಲು ಮಡಿಕೇರಿ ನಗರ ಕಾಂಗ್ರೆಸ್ ಸಮಿತಿ ಸಭೆಯಲ್ಲಿ ನಿರ್ಣಯ , ಕೇಂದ್ರದ 546 ಕೋಟಿ ರೂ. 8 ಜಿಲ್ಲೆಗಳಿಗೆ ವಿನಿಯೋಗ ಮುಖ್ಯಮಂತ್ರಿ ಕುಮಾರಸ್ವಾಮಿ , ಕೊಡಗು ಸಂತ್ರಸ್ತರಿಗೆ ಮನೆ ನಿರ್ಮಾಣಕ್ಕೆ ಗುದ್ದಲಿ ಪೂಜೆ ನೆರವೇರಿಸಿದ ಸಿಎಂ , ಅಪರಾಧ ತಡೆಗೆ ಸಾರ್ವಜನಿಕರ ಸಹಭಾಗಿತ್ವ ಅಗತ್ಯ ಕೊಡಗು ಎಸ್‍ಪಿ ಸುಮನ್ ಡಿ.ಪೆನ್ನೇಕರ್ , ಸಶಸ್ತ್ರ ಪಡೆಗಳ ಧ್ವಜ ದಿನಾಚರಣೆ , ಡಿ. 10ರಿಂದ 21ರವರೆಗೆ ವಿಧಾನ ಪರಿಷತ್ ಸದಸ್ಯೆ ವೀಣಾ ಅಚ್ಚಯ್ಯ ಅಲಭ್ಯ , ಅಯ್ಯಂಡ್ರ ರೋಹಿಣಿ ನಾಣಯ್ಯನವರ ಕುಂಚದಲ್ಲಿ ಅರಳಿದ ಭತ್ತದ ತೆನೆಗೂಡು , ಮಡಿಕೇರಿಯಲ್ಲಿ ಸ್ವಚ್ಛತಾ ಜಾಗೃತಿ ಜಾಥ ಸ್ವಚ್ಛ ಪರಿಸರ ನಿರ್ಮಾಣಕ್ಕೆ ಜಯ ಚಿಣ್ಣಪ್ಪ  ಕರೆ  , ಗೌಡ ಜನಾಂಗದ ಕ್ರಿಕೆಟ್ ಪಂದ್ಯಾಟ , ಹಳೇ ವಿದ್ಯಾರ್ಥಿಗಳಿಂದ ಕೊಡುಗೆ ,

ಜಿಲ್ಲಾ ಮಟ್ಟದ ಅತ್ಯುತ್ತಮ ಶಿಕ್ಷಕ ಪ್ರಶಸ್ತಿ ವಿಜೇತ ಶಿಕ್ಷಕನಿಗೆ ಸನ್ಮಾನ

Posted on: October 12, 2018

WhatsApp Image 2018-10-12 at 5.27.00 PM
ಮಡಿಕೇರಿ  : ಜಿಲ್ಲಾ ಮಟ್ಟದ ಅತ್ಯುತ್ತಮ ಶಿಕ್ಷಕ ಪ್ರಶಸ್ತಿಗೆ ಭಾಜನರಾದ ಕೊಂಡಂಗೇರಿಯ ಎಲಿಯಂಗಾಡು ಸರ್ಕಾರಿ ಪ್ರಾಥಮಿಕ ಶಾಲೆಯ ಶಿಕ್ಷಕನಾದ ನಟರಾಜ್, ಹಾಗೂ ಶಾಲಾ ಮುಖ್ಯ ಶಿಕ್ಷಕ ಸುಬ್ರಮಣಿ ಅವರಿಗೆ ಎಲಿಯಂಗಾಡು ಯುವಕ ಸಂಘ ಹಾಗೂ ಶಾಲಾ ಎಸ್.ಡಿ.ಎಂ.ಸಿ ಸಹಯೋಗದಲ್ಲಿ ಜಂಟಿಯಾಗಿ ಸನ್ಮನಾ ಮಾಡಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶಾಲಾ ಎಸ್.ಡಿ.ಎಂ ಸಿ ಅಧ್ಯಕ್ಷರಾದ ಹಂಸ ವಹಿಸಿದರು.

ಮುಖ್ಯ ಅತಿಥಿಯಾಗಿ ಆಗಮಿಸಿ ಮಾತನಾಡಿದ ಒಂಟಿಯಂಗಡಿ ವಲಯ ಕ್ಲಸ್ಟರ್ ಸುಶ್ಮಾ, ಎಲಿಯಂಗಾಡು ಶಾಲೆ ವಿದ್ಯಾರ್ಥಿಗಳು ಪಠ್ಯ ಚಟುವಟಿಕೆಗಳೊಂದಿಗೆ, ಇನ್ನಿತರ ಎಲ್ಲಾ ಚಟುವಟಿಕೆಗಳಲ್ಲಿ ಮುಂದಿದ್ದಾರೆ.ಇದಕ್ಕೆಲ್ಲಾ ಕಾರಣ ಶಾಲೆಯ ಶಿಕ್ಷಕರು.

ಜಿಲ್ಲಾ ಮಟ್ಟದ ಉತ್ತಮ‌ ಶಿಕ್ಷಕ ಪ್ರಶಸ್ತಿಗೆ ಭಾಜನರಾದ ನಟರಾಜ್ ಅವರು, ಚಿತ್ರ ಕಲೆ ಇನ್ನಿತರ ಎಲ್ಲಾ ಚಟುವಟಿಕೆಗಳಲ್ಲಿ ವಿದ್ಯಾರ್ಥಿಗಳನ್ನು ತೊಡಗಿಸಿ ಶಾಲೆಗೆ ಉತ್ತಮ ಹೆಸರನ್ನು ತರುವಲ್ಲಿ ಸಫಲರಾಗಿದ್ದಾರೆ .

ನಾಲ್ಕು ವರ್ಷದ ಹಿಂದೆ ಶಾಲಾ ವಿದ್ಯಾರ್ಥಿಗಳ ಸಂಖ್ಯೆ ೪೦ ಕ್ಕೂ ಹೆಚ್ಚು ಇತ್ತು.ಆದರೆ ಈಗ ವಿದ್ಯಾರ್ಥಿಗಳ ಸಂಖ್ಯೆ ೨೨ ಕ್ಕೆ ಬಂದಿಳಿದಿದೆ.

ಆದರೂ ಶಾಲಾ ಶಿಕ್ಷಕರ ಕಠಿಣ ಪ್ರಯತ್ನದಿಂದ ವಿದ್ಯಾರ್ಥಿಗಳು ಉತ್ತಮ ಶಿಕ್ಷಣವನ್ನು ಪಡೆದು ನಮ್ಮ ತಾಲ್ಲೂಕಿನ ಶಾಲೆಗೆ ಉತ್ತಮ ಹೆಸರನ್ನು ತಂದಿದ್ದಾರೆ ಎಂದರು.

ಎಲಿಯಂಗಾಡು ಯುವಕ ಸಂಘದ ಅಧ್ಯಕ್ಷರಾದ ಅಬ್ದುರಹಮಾನ್( ಅಂದಾಯಿ) ಮಾತನಾಡಿ ಶಾಲಾ ಶಿಕ್ಷಕರಾದ ನಟರಾಜ್ ಅವರು ಕಳೆದ ೮ ವರ್ಷಗಳಿಂದ ಎಲಿಯಂಗಾಡು ಶಾಲಾ ಶಿಕ್ಷಕರಾಗಿ ಉತ್ತಮ ರೀತಿಯಲ್ಲಿ ಕಾರ್ಯನಿರ್ವಹಿಸಿ ಇಂದು ಜಿಲ್ಲಾ ಮಟ್ಟದ ಅತ್ಯುತ್ತಮ ಶಿಕ್ಷಕ ಪ್ರಶಸ್ತಿಯನ್ನು ಪಡೆದಿರುವುದು ಎಲಿಯಂಗಾಡು ಗ್ರಾಮದ ಹೆಮ್ಮೆಯಾಗಿದೆ ಎಂದರು.

ಮುಂದಿನ ದಿನಗಳಲ್ಲಿ ಶಾಲೆಗೆ ಬೇಕಾದ ಎಲ್ಲಾ ರೀತಿಯ ಸಹಕಾರವನ್ನು ನಮ್ಮ ಯುವಕ ಸಂಘ ಹಾಗೂ ನನ್ನ ವೈಯುಕ್ತಿಕವಾಗಿಯೂ ನೀಡಲಿದ್ದೇನೆ ಎಂದು ಭರವಸೆ ನೀಡಿದರು.

ಸನ್ಮಾನ ಸ್ವೀಕರಿಸಿ ಮಾತನಾಡಿದ ಪ್ರಶಸ್ತಿ ವಿಜೇತ ಶಿಕ್ಷಕ ನಟರಾಜ್ ನನಗೆ ಈ ಪ್ರಶಸ್ತಿ ಲಭಿಸಲು ಗ್ರಾಮಸ್ಥರು, ಹಲವಾರು ಯುವಕ ಸಂಘ, ಶಿಕ್ಷಣ ಇಲಾಖೆ, ವಿದ್ಯಾರ್ಥಿಗಳು ಕಾರಣ ಎಂದರು.

ಈ ಸಂದರ್ಭದಲ್ಲಿ ಎಲಿಯಂಗಾಡು ಯುವಕ ಸಂಘದ ವತಿಯಿಂದ ಶಾಲೆಗೆ ಗ್ಯಾಸ್ ಸ್ಟೌವ್ ಕೊಡುಗೆಯಾಗಿ ನೀಡಿದರು.

ಕಾರ್ಯಕ್ರಮದಲ್ಲಿ ಗ್ರಾಮ ಪಂಚಾಯತಿ ಸದಸ್ಯರಾದ ಲೋಕೇಶ್, ಮುಖ್ಯ ಶಿಕ್ಷಕ ಸುಬ್ರಮಣಿ, ಕೊಂಡಂಗೇರಿ ಶಾಲಾ ಮುಖ್ಯ ಶಿಕ್ಷಕರಾದ ರವಿಕುಮಾರ್, ಗ್ರಾಮಸ್ಥರಾದ ,ಸಮದ್, ಮುಸ್ತಫಾ, ಆಲಿ, ಸಾಫಿ, ಶಂಸುದ್ದೀನ್ ಉಪಸ್ಥಿತರಿದ್ದರು.

ನಿಮ್ಮ ಅಭಿಪ್ರಾಯ ತಿಳಿಸಿ

Your email address will not be published. Required fields are marked *