ತಲಕಾವೇರಿ ತುಲಾ ಸಂಕ್ರಮಣ ಜಾತ್ರೆ ಹಿನ್ನೆಲೆ ಏಕಮುಖ ಸಂಚಾರ

Posted on: October 15, 2018

mohan.oct14-2
ಮಡಿಕೇರಿ  : ಭಾಗಮಂಡಲ ಮತ್ತು ತಲಕಾವೇರಿಯಲ್ಲಿ ಅಕ್ಟೋಬರ್, 17 ರಂದು ನಡೆಯಲಿರುವ ತುಲಾ ಸಂಕ್ರಮಣ ಜಾತ್ರೆ ಹಾಗೂ ಕಾವೇರಿ ತೀರ್ಥೋದ್ಭವ ಸಂಬಂಧ ವಾಹನ ದಟ್ಟಣೆ ನಿಯಂತ್ರಿಸಿ, ಸುಗಮ ಸಂಚಾರಕ್ಕೆ ಅವಕಾಶ ಕಲ್ಪಿಸುವ ದೃಷ್ಟಿಯಿಂದ ಮೋಟಾರು ವಾಹನ ಕಾಯ್ದೆ 1988ರ ಕಲಂ 115 ಹಾಗೂ ಕರ್ನಾಟಕ ಮೋಟಾರು ವಾಹನಗಳ ನಿಯಮ 1989ರ (ತಿದ್ದುಪಡಿ ನಿಯಮಾವಳಿ 1990) ನಿಯಮ 221ಎ (5) ರಲ್ಲಿ ದತ್ತವಾದ ಅಧಿಕಾರದಂತೆ ಅಕ್ಟೋಬರ್, 17 ರಂದು ಬೆಳಗ್ಗೆ 10 ಗಂಟೆಯಿಂದ ಅದೇ ದಿನ ರಾತ್ರಿ 10 ಗಂಟೆಯವರೆಗೆ ಏಕಮುಖ ಸಂಚಾರ ವ್ಯವಸ್ಥೆಯನ್ನು ನಿರ್ವಹಿಸಲು ಆರಕ್ಷಕ ಅಧೀಕ್ಷಕರು , ಕೊಡಗು ಜಿಲ್ಲೆ, ಮಡಿಕೇರಿ ಹಾಗೂ ಪ್ರಾದೇಶಿಕ ಸಾರಿಗೆ ಅಧಿಕಾರಿ, ಕೊಡಗು ಜಿಲ್ಲೆ, ಮಡಿಕೇರಿ ಇವರಿಗೆ ಅನುಮತಿಸಿ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ದಂಡಾಧಿಕಾರಿ ಅವರು ಆದೇಶ ಹೊರಡಿಸಿದ್ದಾರೆ.

ಏಕಮುಖ ಸಂಚಾರ ವ್ಯವಸ್ಥೆ ಇಂತಿದೆ : ಮಡಿಕೇರಿ ಕಡೆಯಿಂದ ಭಾಗಮಂಡಲಕ್ಕೆ ಹೋಗುವ ಎಲ್ಲಾ ವಾಹನಗಳು ಮೇಕೇರಿ- ಉಡೋತ್‍ಮೊಟ್ಟೆ-ಅಪ್ಪಂಗಳ ಮಾರ್ಗವಾಗಿ ಭಾಗಮಂಡಲಕ್ಕೆ ಸಂಚರಿಸುವುದು. ಭಾಗಮಂಡಲದಿಂದ ಮಡಿಕೇರಿ ಹಾಗೂ ಮಂಗಳೂರು ಕಡೆಗೆ ಹೋಗುವ ವಾಹನಗಳು ಅಪ್ಪಂಗಳ-ಪನ್ಯ-ಕಾಟಕೇರಿ ಮಾರ್ಗವಾಗಿ ಸಂಚರಿಸುವುದು.

ಈ ಬಗ್ಗೆ ಮೋಟಾರ್ ವಾಹನ ಕಾಯ್ದೆ 1988 ರ ಸೆಕ್ಷನ್ 116 ಹಾಗೂ ಕರ್ನಾಟಕ ಮೋಟಾರ್ ವಾಹನ ನಿಯಮ 1989ರ (ತಿದ್ದುಪಡಿ ನಿಯಮ 1990) ನಿಯಮ 221ಎ(2)ರಂತೆ ಅವಶ್ಯವಿರುವ ಸಂಜ್ಞೆ ಸೂಚನಾ ಫಲಕವನ್ನು ಅಳವಡಿಸಲು ಜಿಲ್ಲಾ ಪೊಲೀಸ್  ಅಧೀಕ್ಷಕರು , ಕೊಡಗು ಜಿಲ್ಲೆ, ಮಡಿಕೇರಿ ಇವರಿಗೆ ಅಧಿಕಾರ ನೀಡಿದೆ ಎಂದು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ದಂಡಾಧಿಕಾರಿ ಅವರು ತಿಳಿಸಿದ್ದಾರೆ.

ನಿಮ್ಮ ಅಭಿಪ್ರಾಯ ತಿಳಿಸಿ

Your email address will not be published. Required fields are marked *