ಬ್ರೇಕಿಂಗ್ ನ್ಯೂಸ್
ಹೈ ಕಮಾಂಡ್ ಸೂಚಿಸಿದ ಅಭ್ಯರ್ಥಿಗಳ ಗೆಲುವಿಗೆ ಶ್ರಮಿಸಲು ಮಡಿಕೇರಿ ನಗರ ಕಾಂಗ್ರೆಸ್ ಸಮಿತಿ ಸಭೆಯಲ್ಲಿ ನಿರ್ಣಯ , ಕೇಂದ್ರದ 546 ಕೋಟಿ ರೂ. 8 ಜಿಲ್ಲೆಗಳಿಗೆ ವಿನಿಯೋಗ ಮುಖ್ಯಮಂತ್ರಿ ಕುಮಾರಸ್ವಾಮಿ , ಕೊಡಗು ಸಂತ್ರಸ್ತರಿಗೆ ಮನೆ ನಿರ್ಮಾಣಕ್ಕೆ ಗುದ್ದಲಿ ಪೂಜೆ ನೆರವೇರಿಸಿದ ಸಿಎಂ , ಅಪರಾಧ ತಡೆಗೆ ಸಾರ್ವಜನಿಕರ ಸಹಭಾಗಿತ್ವ ಅಗತ್ಯ ಕೊಡಗು ಎಸ್‍ಪಿ ಸುಮನ್ ಡಿ.ಪೆನ್ನೇಕರ್ , ಸಶಸ್ತ್ರ ಪಡೆಗಳ ಧ್ವಜ ದಿನಾಚರಣೆ , ಡಿ. 10ರಿಂದ 21ರವರೆಗೆ ವಿಧಾನ ಪರಿಷತ್ ಸದಸ್ಯೆ ವೀಣಾ ಅಚ್ಚಯ್ಯ ಅಲಭ್ಯ , ಅಯ್ಯಂಡ್ರ ರೋಹಿಣಿ ನಾಣಯ್ಯನವರ ಕುಂಚದಲ್ಲಿ ಅರಳಿದ ಭತ್ತದ ತೆನೆಗೂಡು , ಮಡಿಕೇರಿಯಲ್ಲಿ ಸ್ವಚ್ಛತಾ ಜಾಗೃತಿ ಜಾಥ ಸ್ವಚ್ಛ ಪರಿಸರ ನಿರ್ಮಾಣಕ್ಕೆ ಜಯ ಚಿಣ್ಣಪ್ಪ  ಕರೆ  , ಗೌಡ ಜನಾಂಗದ ಕ್ರಿಕೆಟ್ ಪಂದ್ಯಾಟ , ಹಳೇ ವಿದ್ಯಾರ್ಥಿಗಳಿಂದ ಕೊಡುಗೆ ,

ನೀರೆಂದು ಭಾವಿಸಿ ವಿಷ ಕುಡಿದ ವ್ಯಕ್ತಿ ಚಿಕಿತ್ಸೆ ಫಲಕಾರಿಯಾಗದೆ ಸಾವು

Posted on: October 11, 2018

WhatsApp Image 2018-10-11 at 5.16.45 PM (1)

 

ಮಡಿಕೇರಿ : ವ್ಯಕ್ತಿಯೋರ್ವ ನೀರೆಂದು ಭಾವಿಸಿ ವಿಷ ಕುಡಿದು ಸಾವನ್ನಪ್ಪಿದ್ದ ಘಟನೆ ವಿರಾಜಪೇಟೆ ಸಮೀಪದ ಕಾವಾಡಿಯಲ್ಲಿ ನಡೆದಿದೆ.

ಅಮ್ಮತ್ತಿ ಸಮೀಪದ ಇಂಜೀಲಗೆರೆಯ ಪುಳಿಯೇರಿ ನಿವಾಸಿ ವಿಜು ( 36) ಎಂಬಾತನೇ ಸಾವನ್ನಪ್ಪಿದ್ದ ದುರ್ದೈವಿ.
ಖಾಸಗಿ ತೋಟವೊಂದರಲ್ಲಿ ಸೆಂಟ್ರಿಂಗ್ ಕೆಲಸ ಮಾಡುತ್ತಿದ್ದ ವೇಳೆ ಬಾಯಾರಿಕೆಯಾಗಿ ಈತ ನೀರೆಂದು ಭಾವಿಸಿ ಬಾಟಲಿಯಲ್ಲಿದ್ದ ವಿಷ ಕುಡಿದು ಚಿಂತಾಜನಕ ಸ್ಥಿತಿಯಲ್ಲಿ ಇರುವುದನ್ನು ಕಂಡ ಸಹ ಕೆಲಸಗಾರರು ಸಮೀಪದ ಆರ್.ಐ.ಹೆಚ್.ಪಿ ಆಸ್ಪತ್ರೆಯಲ್ಲಿ ಪ್ರಥಮ ಚಿಕಿತ್ಸೆ ಕೊಡಿಸಿದ್ದಾರೆ.

ಬಳಿಕ ಹೆಚ್ಚಿನ ಚಿಕಿತ್ಸೆಗೆಂದು ಜಿಲ್ಲಾಸ್ಪತ್ರೆ ಮಡಿಕೇರಿಗೆ ಸಾಗಿಸಿದರಾದರು ಚಿಕಿತ್ಸೆ ಫಲಕಾರಿಯಾಗದೆ ವಿಜು ಸಾವನ್ನಪಿದ್ದಾನೆ. ಈತ ಹೆಂಡತಿ ಇಬ್ಬರು ಮಕ್ಕಳನ್ನು ಅಗಲಿದ್ದಾನೆ. ಈ ಘಟನೆ ಕುರಿತು ವಿರಾಜಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಸಾವಿನ ಬಗ್ಗೆ ಉದ್ಭವಿಸಿರುವ ಊಹಾಪೋಹಗಳಿಗೆ ಪೊಲೀಸರ ತನಿಖೆ ನಂತರವಷ್ಟೇ ನಿಖರವಾದ ಕಾರಣ ತಿಳಿದು ಬರಲಿದೆ.

.

ನಿಮ್ಮ ಅಭಿಪ್ರಾಯ ತಿಳಿಸಿ

Your email address will not be published. Required fields are marked *