ಬ್ರೇಕಿಂಗ್ ನ್ಯೂಸ್
ಹೈ ಕಮಾಂಡ್ ಸೂಚಿಸಿದ ಅಭ್ಯರ್ಥಿಗಳ ಗೆಲುವಿಗೆ ಶ್ರಮಿಸಲು ಮಡಿಕೇರಿ ನಗರ ಕಾಂಗ್ರೆಸ್ ಸಮಿತಿ ಸಭೆಯಲ್ಲಿ ನಿರ್ಣಯ , ಕೇಂದ್ರದ 546 ಕೋಟಿ ರೂ. 8 ಜಿಲ್ಲೆಗಳಿಗೆ ವಿನಿಯೋಗ ಮುಖ್ಯಮಂತ್ರಿ ಕುಮಾರಸ್ವಾಮಿ , ಕೊಡಗು ಸಂತ್ರಸ್ತರಿಗೆ ಮನೆ ನಿರ್ಮಾಣಕ್ಕೆ ಗುದ್ದಲಿ ಪೂಜೆ ನೆರವೇರಿಸಿದ ಸಿಎಂ , ಅಪರಾಧ ತಡೆಗೆ ಸಾರ್ವಜನಿಕರ ಸಹಭಾಗಿತ್ವ ಅಗತ್ಯ ಕೊಡಗು ಎಸ್‍ಪಿ ಸುಮನ್ ಡಿ.ಪೆನ್ನೇಕರ್ , ಸಶಸ್ತ್ರ ಪಡೆಗಳ ಧ್ವಜ ದಿನಾಚರಣೆ , ಡಿ. 10ರಿಂದ 21ರವರೆಗೆ ವಿಧಾನ ಪರಿಷತ್ ಸದಸ್ಯೆ ವೀಣಾ ಅಚ್ಚಯ್ಯ ಅಲಭ್ಯ , ಅಯ್ಯಂಡ್ರ ರೋಹಿಣಿ ನಾಣಯ್ಯನವರ ಕುಂಚದಲ್ಲಿ ಅರಳಿದ ಭತ್ತದ ತೆನೆಗೂಡು , ಮಡಿಕೇರಿಯಲ್ಲಿ ಸ್ವಚ್ಛತಾ ಜಾಗೃತಿ ಜಾಥ ಸ್ವಚ್ಛ ಪರಿಸರ ನಿರ್ಮಾಣಕ್ಕೆ ಜಯ ಚಿಣ್ಣಪ್ಪ  ಕರೆ  , ಗೌಡ ಜನಾಂಗದ ಕ್ರಿಕೆಟ್ ಪಂದ್ಯಾಟ , ಹಳೇ ವಿದ್ಯಾರ್ಥಿಗಳಿಂದ ಕೊಡುಗೆ ,

ಬಾವಿಯಲ್ಲಿ ಕಾರ್ಮಿಕನ ಮೃತದೇಹ ಪತ್ತೆ

Posted on: October 23, 2018

kod nw1

ಮಡಿಕೇರಿ : ನಗರದ ಕೊಹಿನೂರು ರಸ್ತೆಯ ಕಟ್ಟಡದ ಹಿಂಭಾಗದ ಬಾವಿಯೊಂದರಲ್ಲಿ ಕೂಲಿ ಕಾರ್ಮಿಕನ ಮೃತದೇಹ ಪತ್ತೆಯಾಗಿದೆ.

ಮೂಲತಃ ಕೇರಳ ರಾಜ್ಯದ ಕಣ್ಣ (54) ಎಂಬಾತನೇ ಮೃತಪಟ್ಟ ದುರ್ದೈವಿಯಾಗಿದ್ದು, 3 ದಿನಗಳ ಹಿಂದೆ ಕಾಲು ಜಾರಿ ಬಾವಿಗೆ ಬಿದ್ದಿರಬಹುದೆಂದು ಸಾರ್ವಜನಿಕರು ಶಂಕೆ ವ್ಯಕ್ತಪಡಿಸಿದ್ದಾರೆ. ಮೃತ ವ್ಯಕ್ತಿ ಕಣ್ಣ ಹಲವು ವರ್ಷಗಳ ಹಿಂದೆ ಮಡಿಕೇರಿಗೆ ಬಂದು ನೆಲೆಸಿದ್ದು, ಕೂಲಿ ಮಾಡಿ ಜೀವನ ಸಾಗಿಸುತ್ತಿದ್ದ. ಕಟ್ಟಡವೊಂದರ ಬಾವಿಯ ಪಕ್ಕದಲ್ಲಿರುವ ಅತೀ ಚಿಕ್ಕದಾದ ಪಂಪ್ ಹೌಸ್ ಕೊಠಡಿಯಲ್ಲಿ ರಾತ್ರಿ ಕಳೆಯುತ್ತಿದ್ದ ಎನ್ನಲಾಗಿದ್ದು, ಮದ್ಯ ವ್ಯಸನವನ್ನು ಮೈಗೂಡಿಸಿಕೊಂಡಿದ್ದ ಎಂದು ಹೇಳಲಾಗಿದೆ.

ಸಾರ್ವಜನಿಕರ ಸಹಕಾರದಿಂದ ಮೃತದೇಹವನ್ನು ಹೊರತೆಗೆದಿರುವ ಪೊಲೀಸರು ಮಡಿಕೇರಿ ನಗರ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ.

ಠಾಣಾಧಿಕಾರಿ ಷಣ್ಮುಗ ಮತ್ತು ಸಿಬ್ಬಂದಿಗಳು ಸ್ಥಳ ಮಹಜರು ನಡೆಸಿದರು.

ನಿಮ್ಮ ಅಭಿಪ್ರಾಯ ತಿಳಿಸಿ

Your email address will not be published. Required fields are marked *