ಮರಗೋಡುವಿನಲ್ಲಿ ಶೂಟೌಟ್ ಜೆಡಿಎಸ್ ಕಾರ್ಯಕರ್ತನಿಂದ ಬಿಜೆಪಿ ಕಾರ್ಯಕರ್ತನ ಹತ್ಯೆ

Posted on: October 1, 2018

WhatsApp Image 2018-10-01 at 9.11.11 PM
ಮಡಿಕೇರಿ : ಗುಂಡಿನ ದಾಳಿಗೆ ವ್ಯಕ್ತಿಯೋರ್ವ ಮೃತಪಟ್ಟ ಘಟನೆ ಮಡಿಕೇರಿ ತಾಲೂಕಿನ ಮರಗೋಡು ಗ್ರಾಮದಲ್ಲಿ ನಡೆದಿದೆ.

ಮರಗೋಡು ಬಿಜೆಪಿ ಸ್ಥಾನೀಯ ಸಮಿತಿ ಕಾರ್ಯದರ್ಶಿ ಕಾನಡ್ಕ ತಿಲಕ ರಾಜ್ (೪೦) ಮೃತ ದುರ್ದೈವಿ. ಆರೋಪಿ ಜೆಡಿಎಸ್ ಬೆಂಬಲಿತ ಗ್ರಾ.ಪಂ ಸದಸ್ಯ ನಂದಾ ನಾಣಯ್ಯ ತಲೆ ಮರೆಸಿಕೊಂಡಿದ್ದಾನೆ.
ಮೃತರು ಪತ್ನಿ ಓರ್ವ ಪುತ್ರ ಹಾಗೂ ಪುತ್ರಿಯನ್ನು ಅಗಲಿದ್ದಾರೆ. ಇಂದು ಸಂಜೆ ೬. ಗಂಟೆ ಸುಮಾರಿಗೆ ಮರಗೋಡು ಜಂಕ್ಷನ್ ಬಳಿ ತಿಲಕ್ ರಾಜ್ ಹಾಗೂ ನಂದಾ ನಾಣಯ್ಯ ನಡುವೆ ವಾಗ್ವಾದ ನಡೆದು ನಂದಾ ನಾಣಯ್ಯ ಹಾರಿಸಿದ ಗುಂಡಿಗೆ ತಿಲಕ್ ಬಲಿಯಾಗಿದ್ದರೆ.

ಗಾಯಾಳಾಗಿದ್ದ ತಿಲಕ್ ರಾಜನ್ನು ಮಡಿಕೇರಿ ಆಸ್ಪತ್ರೆಗೆ ಕರೆದೊಯ್ಯುವ ಸಂದರ್ಭ ಮಾರ್ಗ ಮಧ್ಯೆ ಸಾವನ್ನಪ್ಪಿದ್ದಾರೆ. ರಾಜಕೀಯ ವೈಸಮ್ಯವೇ ಕೃತ್ಯಕ್ಕೆ ಕಾರಣವೆಂದು ಹೇಳಲಾಗುತ್ತಿದ್ದು, ಸ್ಥಳಕ್ಕೆ ಡಿವೈಎಸ್ಪಿ ಸುಂದರ್ ರಾಜ್, ಗ್ರಾಮಾಂತರ ಠಾಣಾಧಿಕಾರಿ ಚೇತನ್ ಹಾಗೂ ಪೊಲೀಸ್ ಭೇಟಿ ನೀಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಆರೋಪಿ ಪತ್ತೆಗಾಗಿ ಕಾರ್ಯಾಚರಣೆ ಚುರುಕುಗೊಳಿಸಲಾಗಿದೆ.

::ಆಸ್ಪತ್ರೆಗೆ ಶಾಸಕರ ಭೇಟಿ::
ಜಿಲ್ಲಾ ಆಸ್ಪತ್ರೆಗೆ ಭೇಟಿ ನೀಡಿದ ಶಾಸಕ ಕೆ ಜಿ ಬೋಪಯ್ಯ ಮಾತನಾಡಿ ನಿಷ್ಠಾವಂತ ಕಾರ್ಯಕರ್ತನನ್ನು ಕಳೆದುಕೊಂಡಿರುವುದಾಗಿ ಬೇಸರ ವ್ಯಕ್ತಪಡಿಸಿದರು. ರಾಜಕೀಯ ವೈಷಮ್ಯದಿಂದ ಹತ್ಯೆ ನಡೆದಿರುವುದು ಅತ್ಯಂತ ಖಂಡನೀಯ ಮತ್ತು ಆತಂಕಕಾರಿ ಬೆಳವಣಿಗೆಯಾಗಿದ್ದು ಪೊಲೀಸ್ ಇಲಾಖೆ ಸೂಕ್ತ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿದರು. ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಸಂಪೂರ್ಣ ಹದಗೆಟ್ಟಿದೆ ಎಂದು ಆರೋಪಿಸಿದರು. ಈ ಸಂದರ್ಭ ಜಿಲ್ಲಾ ಪಂ. ಅಧ್ಯಕ್ಷ ಬಿ.ಎ. ಹರೀಶ್ ಇದ್ದರು

ನಿಮ್ಮ ಅಭಿಪ್ರಾಯ ತಿಳಿಸಿ

Your email address will not be published. Required fields are marked *