ಬ್ರೇಕಿಂಗ್ ನ್ಯೂಸ್
ಹೈ ಕಮಾಂಡ್ ಸೂಚಿಸಿದ ಅಭ್ಯರ್ಥಿಗಳ ಗೆಲುವಿಗೆ ಶ್ರಮಿಸಲು ಮಡಿಕೇರಿ ನಗರ ಕಾಂಗ್ರೆಸ್ ಸಮಿತಿ ಸಭೆಯಲ್ಲಿ ನಿರ್ಣಯ , ಕೇಂದ್ರದ 546 ಕೋಟಿ ರೂ. 8 ಜಿಲ್ಲೆಗಳಿಗೆ ವಿನಿಯೋಗ ಮುಖ್ಯಮಂತ್ರಿ ಕುಮಾರಸ್ವಾಮಿ , ಕೊಡಗು ಸಂತ್ರಸ್ತರಿಗೆ ಮನೆ ನಿರ್ಮಾಣಕ್ಕೆ ಗುದ್ದಲಿ ಪೂಜೆ ನೆರವೇರಿಸಿದ ಸಿಎಂ , ಅಪರಾಧ ತಡೆಗೆ ಸಾರ್ವಜನಿಕರ ಸಹಭಾಗಿತ್ವ ಅಗತ್ಯ ಕೊಡಗು ಎಸ್‍ಪಿ ಸುಮನ್ ಡಿ.ಪೆನ್ನೇಕರ್ , ಸಶಸ್ತ್ರ ಪಡೆಗಳ ಧ್ವಜ ದಿನಾಚರಣೆ , ಡಿ. 10ರಿಂದ 21ರವರೆಗೆ ವಿಧಾನ ಪರಿಷತ್ ಸದಸ್ಯೆ ವೀಣಾ ಅಚ್ಚಯ್ಯ ಅಲಭ್ಯ , ಅಯ್ಯಂಡ್ರ ರೋಹಿಣಿ ನಾಣಯ್ಯನವರ ಕುಂಚದಲ್ಲಿ ಅರಳಿದ ಭತ್ತದ ತೆನೆಗೂಡು , ಮಡಿಕೇರಿಯಲ್ಲಿ ಸ್ವಚ್ಛತಾ ಜಾಗೃತಿ ಜಾಥ ಸ್ವಚ್ಛ ಪರಿಸರ ನಿರ್ಮಾಣಕ್ಕೆ ಜಯ ಚಿಣ್ಣಪ್ಪ  ಕರೆ  , ಗೌಡ ಜನಾಂಗದ ಕ್ರಿಕೆಟ್ ಪಂದ್ಯಾಟ , ಹಳೇ ವಿದ್ಯಾರ್ಥಿಗಳಿಂದ ಕೊಡುಗೆ ,

ಸಿಗದ ಮಂಜುಳಾ ಕಳೇಬರ ಪೋಷಕರಿಂದ ಪ್ರತಿರೂಪದ ಅಂತ್ಯಸಂಸ್ಕಾರ

Posted on: October 12, 2018

32-3

ಮಡಿಕೇರಿ: ಭೂ ಕುಸಿತ ಮತ್ತು ಪ್ರವಾಹದಿಂದ ಸ್ಮಶಾನ ಮೌನ ಆವರಿಸಿರುವ ಜೋಡುಪಾಲ ಗ್ರಾಮದಲ್ಲಿ  ಮನಕಲಕುವ ಸನ್ನಿವೇಶವೊಂದಕ್ಕೆ ಸಾಕ್ಷಿಯಾಯಿತು. ಕೆಸರಿನಾರ್ಭಟದ ಪ್ರವಾಹ ಉಕ್ಕಿ ಭೂ ಸಮಾಧಿಯಾದ ಮಂಜುಳಾಳ(15) ಮೃತದೇಹ ಇಂದಿಗೂ ಪತ್ತೆಯಾಗಿಲ್ಲ.

ಇದರಿಂದ ಮನನೊಂದಿರುವ ಆಕೆಯ ಪೋಷಕರು ಮಂಜುಳಾಳ ಪ್ರತಿರೂಪವನ್ನು ತಯಾರಿಸಿ ಅದಕ್ಕೆ ಅಂತ್ಯಕ್ರಿಯೆ ನೆರವೇರಿಸುವ ಮೂಲಕ ಮೋಕ್ಷ ದೊರಕಿಸುವ ಪ್ರಯತ್ನ ಮಾಡಿದರು. ಅಡಿಕೆ ಹಾಳೆಯಲ್ಲಿ ಮಂಜುಳಾಳ ಪ್ರತಿರೂಪ ತಯಾರಿಸಿ, ಅದಕ್ಕೆ ರೇಷ್ಮೆ ಸೀರೆ ತೊಡಿಸಿ, ಆಕೆಯ ಇಷ್ಟದ ವ್ಯಾನಿಟಿ ಬ್ಯಾಗ್ ಹಾಗೂ ಆಕೆ ಥ್ರೋಬಾಲ್ ಕ್ರೀಡೆಯಲ್ಲಿ ಗೆದ್ದ ಪದಕ ತೊಡಿಸಿ ಪ್ರತಿರೂಪವನ್ನು ಮದುಮಗಳಂತೆ ಸಿಂಗರಿಸಿದರು. ತದನಂತರ ಕುಡಿಯ ಸಂಪ್ರದಾಯದಂತೆ ಮದುವೆ ಶಾಸ್ತ್ರವನ್ನೂ ಮಾಡಿದರು.

ಮಂಜುಳಾ ಮೃತಪಟ್ಟ ಸ್ಥಳದಲ್ಲೇ ಅಂತ್ಯ ಸಂಸ್ಕಾರದ ವಿಧಿ ವಿಧಾನಗಳನ್ನು ನೆರವೇರಿಸಿದ ಮೃತಳ ತಂದೆ ಕುಡಿಯರ ಸೋಮಯ್ಯ ಮತ್ತು ತಾಯಿ ಜಯಂತಿ ಅವರುಗಳ ಕಣ್ಣೀರು ಮನ ಮಿಡಿಯುವಂತ್ತಿತ್ತು. ಅಲ್ಲಿ ನೆರೆದಿದ್ದ ಮಂಜುಳಾಳ ಕುಟುಂಬಸ್ಥರು, ಮದೆಮಹೇಶ್ವರ ಶಾಲಾ ಶಿಕ್ಷಕರು, ವಿದ್ಯಾರ್ಥಿಗಳು ಸೇರಿದಂತೆ ಬೆಟ್ಟತ್ತೂರು ಗ್ರಾಮಸ್ಥರು ಕಂಬನಿಗರೆದರು.

ನಂತರ ಮಂಜುಳಾಳ ಪ್ರತಿರೂಪವನ್ನು ಆಕೆಯ ಹುಟ್ಟೂರು ಬೆಟ್ಟತ್ತೂರುವಿಗೆ ಕೊಂಡೊಯ್ದು ಕುಟುಂಬಕ್ಕೆ ಸೇರಿದ ಸ್ಮಶಾನದಲ್ಲಿ ಮಣ್ಣು ಮಾಡಲಾಯಿತು.

ಸಂಬಂಧಿಕರ ಮನೆಯಲ್ಲಿ ಸಾವು ಕಾದಿತ್ತು
ಮೂಲತಃ ಬೆಟ್ಟತ್ತೂರಿನ ನಿವಾಸಿ ಸೋಮಯ್ಯ ಅವರ ಪುತ್ರಿ ಮಂಜಳಾ, ಮದೆನಾಡಿನ ಮದೆಮಹೇಶ್ವರ ಪ್ರೌಢಶಾಲೆಯಲ್ಲಿ ಎಸ್‍ಎಸ್‍ಎಲ್‍ಸಿ ವ್ಯಾಸಂಗ ಮಾಡುತ್ತಿದ್ದಳು. ಬೆಟ್ಟತ್ತೂರಿನಿಂದ ಮದೆನಾಡು ಕಡೆಗೆ ಒಂದೇ ಬಸ್ ವ್ಯವಸ್ಥೆ ಇದ್ದ ಹಿನ್ನೆಲೆಯಲ್ಲಿ ಆಕೆಯನ್ನು ಜೋಡುಪಾಲದ ತನ್ನ ಸಂಬಂಧಿಕರಾದ ಬಸಪ್ಪ ಅವರ ಮನೆಯಲ್ಲಿ ತಂಗಲು ವ್ಯವಸ್ಥೆ ಮಾಡಲಾಗಿತ್ತು.
ಮಂಜುಳಾ ಅತ್ಯುತ್ತಮ ಥ್ರೋಬಾಲ್ ಆಟಗಾರ್ತಿಯಾಗಿದ್ದು, ಕಳೆದ ವರ್ಷ ಉಡುಪಿಯಲ್ಲಿ ನಡೆದ ವಿಭಾಗ ಮಟ್ಟದ ಕ್ರೀಡಾಕೂಟದಲ್ಲಿ ಪಾಲ್ಗೊಂಡು ಗಮನಾರ್ಹ ಸಾಧನೆ ಮಾಡಿದ್ದಳು. ಈ ಬಾರಿಯ ಕ್ರೀಡಾಕೂಟಕ್ಕೂ ಈಕೆಯನ್ನು ಆಯ್ಕೆ ಮಾಡಲಾಗಿತ್ತು.

ಆಗಸ್ಟ್ 16ರಂದು ಬೆಳಗ್ಗೆ 8 ಗಂಟೆ ಸುಮಾರಿಗೆ ಭಾರೀ ಮಳೆಯಿಂದ ಸಂಭವಿಸಿದ ಜಲ ಪ್ರಳಯದಿಂದಾಗಿ ಬಸಪ್ಪ ಅವರ ಮನೆಗೆ ಸಂಪೂರ್ಣ ನೀರು ನುಗ್ಗಿತ್ತು. ಮನೆಯಲ್ಲಿದ್ದ ಬಸಪ್ಪ, ಗೌರಮ್ಮ, ಮೋನಿಶಾ ಸೇರಿದಂತೆ ಮಂಜುಳಾ ಕೂಡ ನೀರಿನಲ್ಲಿ ಮನೆ ಸಹಿತ ಕೊಚ್ಚಿಕೊಂಡು ಹೋಗಿದ್ದರು. ಮಂಜುಳಾ ಹೊರತುಪಡಿಸಿ ಮೂವರ ಶವಗಳು ಪತ್ತೆಯಾಗಿ ಅಂತ್ಯ ಸಂಸ್ಕಾರವೂ ನಡೆದಿದೆ. ಮಂಜುಳಾ ಜಲಪ್ರಳಯದಲ್ಲಿ ಕಣ್ಮರೆಯಾಗಿ ಇಂದಿಗೆ 56 ದಿನಗಳೇ ಕಳೆದಿದೆ, ಆದರೆ ಕಳೇಬರ ಮಾತ್ರ ದೊರೆತ್ತಿಲ್ಲ.

35-2

ನಿಮ್ಮ ಅಭಿಪ್ರಾಯ ತಿಳಿಸಿ

Your email address will not be published. Required fields are marked *