ಬ್ರೇಕಿಂಗ್ ನ್ಯೂಸ್
ಹೈ ಕಮಾಂಡ್ ಸೂಚಿಸಿದ ಅಭ್ಯರ್ಥಿಗಳ ಗೆಲುವಿಗೆ ಶ್ರಮಿಸಲು ಮಡಿಕೇರಿ ನಗರ ಕಾಂಗ್ರೆಸ್ ಸಮಿತಿ ಸಭೆಯಲ್ಲಿ ನಿರ್ಣಯ , ಕೇಂದ್ರದ 546 ಕೋಟಿ ರೂ. 8 ಜಿಲ್ಲೆಗಳಿಗೆ ವಿನಿಯೋಗ ಮುಖ್ಯಮಂತ್ರಿ ಕುಮಾರಸ್ವಾಮಿ , ಕೊಡಗು ಸಂತ್ರಸ್ತರಿಗೆ ಮನೆ ನಿರ್ಮಾಣಕ್ಕೆ ಗುದ್ದಲಿ ಪೂಜೆ ನೆರವೇರಿಸಿದ ಸಿಎಂ , ಅಪರಾಧ ತಡೆಗೆ ಸಾರ್ವಜನಿಕರ ಸಹಭಾಗಿತ್ವ ಅಗತ್ಯ ಕೊಡಗು ಎಸ್‍ಪಿ ಸುಮನ್ ಡಿ.ಪೆನ್ನೇಕರ್ , ಸಶಸ್ತ್ರ ಪಡೆಗಳ ಧ್ವಜ ದಿನಾಚರಣೆ , ಡಿ. 10ರಿಂದ 21ರವರೆಗೆ ವಿಧಾನ ಪರಿಷತ್ ಸದಸ್ಯೆ ವೀಣಾ ಅಚ್ಚಯ್ಯ ಅಲಭ್ಯ , ಅಯ್ಯಂಡ್ರ ರೋಹಿಣಿ ನಾಣಯ್ಯನವರ ಕುಂಚದಲ್ಲಿ ಅರಳಿದ ಭತ್ತದ ತೆನೆಗೂಡು , ಮಡಿಕೇರಿಯಲ್ಲಿ ಸ್ವಚ್ಛತಾ ಜಾಗೃತಿ ಜಾಥ ಸ್ವಚ್ಛ ಪರಿಸರ ನಿರ್ಮಾಣಕ್ಕೆ ಜಯ ಚಿಣ್ಣಪ್ಪ  ಕರೆ  , ಗೌಡ ಜನಾಂಗದ ಕ್ರಿಕೆಟ್ ಪಂದ್ಯಾಟ , ಹಳೇ ವಿದ್ಯಾರ್ಥಿಗಳಿಂದ ಕೊಡುಗೆ ,

ಕೇರಳದಲ್ಲಿ ಅಯ್ಯಪ್ಪ ಭಕ್ತರ ಮೇಲಿನ ಹಲ್ಲೆ ಖಂಡಿಸಿ ಕೊಡಗು ಬಿಜೆಪಿ ಪ್ರತಿಭಟನೆ

Posted on: November 20, 2018

KODN20

ಮಡಿಕೇರಿ : ಶಬರಿಮಲೆ ಅಯ್ಯಪ್ಪ ದೇವಾಲಯಕ್ಕೆ ಆಗಮಿಸುವ ಹಿಂದೂಗಳ ಹಾಗೂ ಮಹಿಳೆಯರ ದೇವಾಲಯ ಪ್ರವೇಶ ಕುರಿತಂತೆ ಪ್ರತಿಭಟನೆ ನಡೆಸುತ್ತಿರುವವರ ಮೇಲೆ ಕೇರಳ ಪೋಲಿಸರಿಂದ ದೌಜನ್ಯ ನಡೆಯುತ್ತಿದೆ ಎಂದು ಆರೋಪಿಸಿ ಕೊಡಗು ಜಿಲ್ಲಾ ಬಿಜೆಪಿ ವತಿಯಿಂದ ಮಡಿಕೇರಿಯಲ್ಲಿ ಪ್ರತಿಭಟನೆ ನಡೆಸಲಾಯಿತ್ತು.

ನಗರದ ಜನರಲ್ ತಿಮ್ಮಯ್ಯ ವೃತ್ತದ ಬಳಿ ಜಮಾಯಿಸಿದ ಬಿಜೆಪಿ ಕಾರ್ಯಕರ್ತರು ಕೇರಳ ಸರ್ಕಾರದ ವಿರುದ್ಧ ಘೋಷಣೆಗಳನ್ನು ಕೂಗಿದ ಪ್ರತಿಭಟನಾಕಾರರು ಜಿಲ್ಲಾಧಿಕಾರಿ ಕಛೇರಿಗೆಬ ತೆರೆಳಿ ಮನವಿಪತ್ರ ಸಲಲಿಸಿದರು.

ಈ ಸಂದರ್ಭದಲ್ಲಿ ಮಾತನಾಡಿದ ಬಿಜೆಪಿ ಜಿಲ್ಲಾ ಅಧ್ಯಕ್ಷ ಭಾರತೀಶ್ ಶಬರಿಮಲೆ ಕ್ಷೇತ್ರದ ಪ್ರವೇಶಕ್ಕೆ ಸಂಬಂಧಿಸಿದಂತೆ ಉದ್ಬವಿಸಿರುವ ಸಮಸ್ಯೆಯನ್ನು ಬಗೆಹರಿಸುವ ಬದಲು ಅಲ್ಲಿನ ಕಮ್ಯುನಿಸ್ಟ್ ಸರಕಾರ ಅಯ್ಯಪ್ಪ ದೇವಾಲಯಕ್ಕೆ ಆಗಮಿಸುವ ಹಿಂದೂ ಭಕ್ತರ ಮೇಲೆ ದೌಜನ್ಯ ಎಸಗುತ್ತದೆ ಎಂದು ಆರೋಪಿಸಿದರು. ವ್ಯವಸ್ಥಿತಿತ ಷಡ್ಯಂತ್ರದ ಮೂಲಕ ಹಿಂದೂಗಳ ಭಾವನೆಗಳಿಗೆ ದಕ್ಕೆಯನ್ನುಂಟುಮಾಡಲಾಗುತ್ತಿದ್ದು, ಇದನ್ನು ಖಂಡಿಸುದಾಗಿ ತಿಳಿಸಿದರು. ಶಬರಿಮಲೆ ಪಾವಿತ್ರ್ಯತೆಯನ್ನು ಕಾಪಾಡುವ ನಿಟ್ಟಿನಲ್ಲಿ ಬಿಜೆಪಿ ಹೋರಾಟ ಮುಂದುವರೆಯಲಿದೆ ಎಂದು ಹೇಳಿದರು.

ಶಾಂತಿಯುತವಾಗಿ ಸನ್ನಿದಾನದಲ್ಲಿ ಹಾಗೂ ಹೊರಭಾಗದಲ್ಲಿ ಪ್ರತಿಭಟನೆಯನ್ನು ಮಾಡುವಂತ ಹಿಂದೂ ಭಕ್ತರನ್ನು ಮೆರವಣಿಗೆ ಹೋಗುವರ ಮೇಲೆ ಹಲ್ಲೆ ನಡೆಸಿ ಸುಳ್ಳು ಕೇಸು ದಾಖಲಿಸಿ ಹಿಂದೂಗಳ ಧ್ವನಿಯನ್ನ ಆಡಗಿಸಿ ಅವರನ್ನು ಜೈಲಿಗೆ ಹಟ್ಟುವ ಕೆಲಸಕ್ಕೆ ಕೇರಳ ಸರ್ಕಾರ ಮುಂದಾಗಿದೆ ಇದನ್ನು ಖಂಡಿಸುದಾಗಿ ಹೇಳಿದ ಅವರು ಮುಂದಿನ ದಿನಗಳಲ್ಲಿ ಪಕ್ಷದ ಕಾರ್ಯಕರ್ತರು ಕೇರಳಕ್ಕೆ ಹೋಗುವ ವ್ಯವಸ್ಥೆಗಳಿದೆ. ಈಗಾಗಲೇ ಅಲ್ಲಿನ ವರದಿಗಳನ್ನು ಸಂಸದರಾದ ಕಟೀಲ್‍ರವರು ತೆಗೆದುಕೊಂಡು ಬಂದ ನಂತರ ಮುಂದೆ ಏನು ಮಾಡಬೇಕು ಎಂಬುದರ ಬಗ್ಗೆ ನಿರ್ಧರಿಸಲಿದ್ದು, ಕೇರಳ ಜನತೆಯ ಜೊತೆ ಕೊಡಗಿನವರು ಇದ್ದೇವೆ ಎಂಬುದಾಗಿ ಹೇಳಿದರು.

ಈ ಕುರಿತು ಈಗಾಗಲೇ ರಾಷ್ಟ್ರಪತಿಗಳಿಗೆ ಪತ್ರ ಬರೆಯಲಾಗಿದ್ದು, ಶಬರಿಮಲೆ ದೇವಾಲಯದ ಧಾರ್ಮಿಕ ಆಚಾರ, ವಿಚಾರ, ಸಂಸ್ಕøತಿಗೆ ದಕ್ಕೆಯಾದರೆ ಅದಕ್ಕೆ ಕೇರಳ ರಾಜ್ಯದ ಮುಖ್ಯಮಂತ್ರಿಗಳೇ ನೇರ ಹೊಣೆ ಎಂದರು.

ವಿಶ್ವ ಹಿಂದೂ ಪರಿಷತ್‍ನ ಜಿಲ್ಲಾ ಪ್ರಧಾನ ಕಾರ್ಯದರ್ಶಿ ನರಸಿಂಹ ಮಾತನಾಡಿ, ಶತಮಾನಗಳಿಂದಲೂ ಹಿಂದೂ ಧರ್ಮದಲ್ಲಿ ಧಾರ್ಮಿಕ ನಂಬಿಕೆಗಳನ್ನು ಪಾಲಿಸುತ್ತಾ ಬರಲಾಗಿದೆ. ಆದರೆ ಇತ್ತೀಚಿನ ದಿನಗಳಲ್ಲಿ ಹಿಂದೂಗಳ ಭಾವನೆಗೆ ವಿರುದ್ಧವಾದ ನಿರ್ಧಾರಗಳನ್ನು ಕೈಗೊಳ್ಳಲಾಗುತ್ತಿದೆ ಎಂದು ಅಸಮಾಧಾನ ವ್ಯಕ್ತ ಪಡೆಸಿದ ಅವರು ಕೇರಳ ರಾಜ್ಯದಲ್ಲಿ ಹೀಗೆ ಹಿಂದೂ ವಿರೋಧ ನೀತಿ ಮುಂದುವರೆದರೆ ಜನಾಂದೋಲನವನ್ನು ಹಮ್ಮಿಕೊಳ್ಳಲಾಗುವುದು ಎಚ್ಚರಿಕೆಯನ್ನು ನೀಡಿದರು.

ಪ್ರತಿಭಟನೆಯಲ್ಲಿ ಬಿಜೆಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ರಾಬಿನ್ ದೇವಯ್ಯ, ಪ್ರಮುಖರಾಧ ರವಿ ಬಸಪ್ಪ, ಮಣಿ ಉತ್ತಪ್ಪ, ಮಹಿಳಾ ಮೋರ್ಚಾ ಜಿಲ್ಲಾಧ್ಯಕ್ಷೆ ಯಮುನಾ ಚಂಗಪ್ಪ, ಜಿ.ಪಂ. ಉಪಾಧ್ಯಕ್ಷೆ ಲೋಕೇಶ್ವರಿ ಗೋಪಾಲ್, ಜಿ.ಪಂ.ಸದಸ್ಯ ಮುರಳಿ, ಬಿಜೆಪಿ ನಗರಾಧ್ಯಕ್ಷ
ಮಹೇಶ್ ಜೈನಿ, ನಗರಸಭಾ ಸದಸ್ಯರಾದ ರಮೇಶ್, ಉಣ್ಣಿಕೃಷ್ಣ, ಅನಿತಾ ಪೂವಯ್ಯ, ಪೊನ್ನಪ್ಪ, ಹಿಂದೂ ಸಂಘಟನೆಯ ಪ್ರಮುಖರಾದ ಚೇತನ್, ಕುಕ್ಕೇರ ಅಜಿತ್ ಇನ್ನಿತ್ತರರು ಇದ್ದರು.

mdk_nnr_newsk_21907

ನಿಮ್ಮ ಅಭಿಪ್ರಾಯ ತಿಳಿಸಿ

Your email address will not be published. Required fields are marked *