ಬ್ರೇಕಿಂಗ್ ನ್ಯೂಸ್
ಹೈ ಕಮಾಂಡ್ ಸೂಚಿಸಿದ ಅಭ್ಯರ್ಥಿಗಳ ಗೆಲುವಿಗೆ ಶ್ರಮಿಸಲು ಮಡಿಕೇರಿ ನಗರ ಕಾಂಗ್ರೆಸ್ ಸಮಿತಿ ಸಭೆಯಲ್ಲಿ ನಿರ್ಣಯ , ಕೇಂದ್ರದ 546 ಕೋಟಿ ರೂ. 8 ಜಿಲ್ಲೆಗಳಿಗೆ ವಿನಿಯೋಗ ಮುಖ್ಯಮಂತ್ರಿ ಕುಮಾರಸ್ವಾಮಿ , ಕೊಡಗು ಸಂತ್ರಸ್ತರಿಗೆ ಮನೆ ನಿರ್ಮಾಣಕ್ಕೆ ಗುದ್ದಲಿ ಪೂಜೆ ನೆರವೇರಿಸಿದ ಸಿಎಂ , ಅಪರಾಧ ತಡೆಗೆ ಸಾರ್ವಜನಿಕರ ಸಹಭಾಗಿತ್ವ ಅಗತ್ಯ ಕೊಡಗು ಎಸ್‍ಪಿ ಸುಮನ್ ಡಿ.ಪೆನ್ನೇಕರ್ , ಸಶಸ್ತ್ರ ಪಡೆಗಳ ಧ್ವಜ ದಿನಾಚರಣೆ , ಡಿ. 10ರಿಂದ 21ರವರೆಗೆ ವಿಧಾನ ಪರಿಷತ್ ಸದಸ್ಯೆ ವೀಣಾ ಅಚ್ಚಯ್ಯ ಅಲಭ್ಯ , ಅಯ್ಯಂಡ್ರ ರೋಹಿಣಿ ನಾಣಯ್ಯನವರ ಕುಂಚದಲ್ಲಿ ಅರಳಿದ ಭತ್ತದ ತೆನೆಗೂಡು , ಮಡಿಕೇರಿಯಲ್ಲಿ ಸ್ವಚ್ಛತಾ ಜಾಗೃತಿ ಜಾಥ ಸ್ವಚ್ಛ ಪರಿಸರ ನಿರ್ಮಾಣಕ್ಕೆ ಜಯ ಚಿಣ್ಣಪ್ಪ  ಕರೆ  , ಗೌಡ ಜನಾಂಗದ ಕ್ರಿಕೆಟ್ ಪಂದ್ಯಾಟ , ಹಳೇ ವಿದ್ಯಾರ್ಥಿಗಳಿಂದ ಕೊಡುಗೆ ,

ಕೊಡಗಿನ ಶ್ರೇಷ್ಠ ಸಹಕಾರಿಗಳಿಗೆ ಪ್ರಶಸ್ತಿ ಪ್ರಧಾನ ಸಮಾರಂಭ

Posted on: November 20, 2018

DSC07632
ಮಡಿಕೇರಿ : ಸಹಕಾರ ಕ್ಷೇತ್ರದಲ್ಲಿ ಕೊಡಗು ಜಿಲ್ಲೆಯು ತನ್ನದೇ ಆದ ವಿಶಿಷ್ಟ ಸಾಧನೆಯನ್ನು ಹೊಂದಿದ್ದು, ಜಿಲ್ಲೆಯ ರೈತರ ಏಳಿಗೆಗೆ ಸಾಕಷ್ಟು ಸಹಕಾರ ನೀಡಿರುವುದಾಗಿ ವಿಧಾನ ಪರಿಷತ್ ಸದಸ್ಯರಾದ ಎಂ.ಪಿ.ಸುನೀಲ್ ಸುಬ್ರಮಣಿ ಅವರು ತಿಳಿಸಿದರು.

ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳ ನಿಯಮಿತ, ಕೊಡಗು ಜಿಲ್ಲಾ ಸಹಕಾರ ಯೂನಿಯನ್ ನಿಯಮಿತ, ಕೊಡಗು ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್ ನಿ, ಸಹಕಾರ ಇಲಾಖೆ, ಕರ್ನಾಟಕ ಇನ್‍ಸ್ಟಿಟ್ಯೂಟ್ ಆಪ್ ಕೋ ಆಪರೇಟಿವ್ ಮ್ಯಾನೇಜ್‍ಮೆಂಟ್, ಹಾಗೂ ಸ್ಥಳೀಯ ಎಲ್ಲಾ ಸಹಕಾರ ಸಂಘಗಳ ಸಂಯುಕ್ತ ಆಶ್ರಯದಲ್ಲಿ 65ನೇ ಅಖಿಲ ಭಾರತ ಸಹಕಾರ ಸಪ್ತಾಹದ ಅಂಗವಾಗಿ ನಗರದ ಹೊಟೇಲ್ ಮಯೂರ ವ್ಯಾಲಿ ವ್ಯೂವ್ ಸಭಾಂಗಣದಲ್ಲಿ ಮಂಗಳವಾರ ನಡೆದ ಸಹಕಾರ ಸಂಸ್ಥೆಗಳ ಮೂಲಕ ಕೌಶಲ್ಯ ತಾಂತ್ರಿಕತೆ ವೃದ್ಧಿಪಡಿಸುವ ದಿನಾಚರಣೆ ಹಾಗೂ ಕೊಡಗಿನ ಶ್ರೇಷ್ಠ ಸಹಕಾರಿಗಳಿಗೆ ಪ್ರಶಸ್ತಿ ಪ್ರಧಾನ ಸಮಾರಂಭವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಸಹಕಾರ ಕ್ಷೇತ್ರದಲ್ಲಿ ರಾಜಕೀಯ ನುಸುಳಬಾರದು. ರಾಜಕೀಯ ನುಸುಳಿದಾಗ ಪ್ರಗತಿ ಕುಂಠಿತವಾಗುತ್ತದೆ ಎಂದು ಅವರು ಅಭಿಪ್ರಾಯ ವ್ಯಕ್ತಪಡಿಸಿದರು.

ಜಿಲ್ಲೆಯಲ್ಲಿ ಸಹಕಾರ ಯೂನಿಯನ್ ಉತ್ತಮ ರೀತಿಯಾಗಿ ಕಾರ್ಯನಿರ್ವಹಿಸುತ್ತಿದೆ. ಗ್ರಾಹಕರಿಗೆ ಎಲ್ಲಾ ರೀತಿಯ ಸಹಕಾರ ನೀಡಿ ಜಿಲ್ಲೆಯನ್ನು ಅಭಿವೃದ್ಧಿಯತ್ತ ಕೊಂಡೊಯ್ಯುತ್ತಿರುವುದಾಗಿ ಅವರು ಮೆಚ್ಚುಗೆ ವ್ಯಕ್ತಪಡಿಸಿದರು.

ಕೊಡಗು ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್ ಅಧ್ಯಕ್ಷರಾದ ಬಿ.ಡಿ.ಮಂಜುನಾಥ್ ಸನ್ಮಾನಿತರನ್ನು ಸನ್ಮಾನಿಸಿ ಮಾತನಾಡಿ ಸನ್ಮಾನಿತರ ಸಾಧನೆಯನ್ನು ಶ್ಲಾಘಿಸುತ್ತಾ ಸಹಕಾರಿ ರಂಗದಲ್ಲಿ ಅವರ ಸಾಧನೆ ಬೇರೆಯವರಿಗೆ ಸ್ಫೂರ್ತಿದಾಯಕವಾಗಿದ್ದು, ಅವರ ಕೊಡುಗೆ ಅಪಾರವಾದದ್ದು ಎಂದು ಅವರು ತಿಳಿಸಿದರು.
ಜಿಲ್ಲೆಯ ರೈತರ ಕಷ್ಟ ಸುಖಗಳಿಗೆ ಡಿಸಿಸಿ ಬ್ಯಾಂಕ್ ಸದಾ ಸ್ಪಂದಿಸುತ್ತಾ ಮುನ್ನಡೆಯುತ್ತಿದೆ. ಇದಕ್ಕೆ ಎಲ್ಲರ ಸಹಕಾರ ಅತ್ಯಗತ್ಯ ಎಂದು ಅವರು ತಿಳಿಸಿದರು.

ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳ ನಿ. ನಿರ್ದೇಶಕರು ಹಾಗೂ ಕೊಡಗು ಜಿಲ್ಲಾ ಸಹಕಾರ ಯೂನಿಯನ್ ನಿ. ಅಧ್ಯಕ್ಷರಾದ ಎ.ಕೆ.ಮನುಮುತ್ತಪ್ಪ ಅವರು ಮಾತನಾಡಿ ಕೊಡಗು ಜಿಲ್ಲೆಯಲ್ಲಿ ಸಹಕಾರ ಕ್ಷೇತ್ರವು ಬಹಳ ವಿಶಾಲವಾಗಿ ಬೆಳೆದಿದ್ದು, ಸ್ವಾತಂತ್ರ್ಯ ಪೂರ್ವದಿಂದಲೂ ರೈತರ ಏಳಿಗೆಗೆ ಸಹಕಾರ ಸಂಸ್ಥೆಗಳು ತಮ್ಮದೇ ಆದ ಕೊಡುಗೆಯನ್ನು ನೀಡಿದ್ದು, ಇಲ್ಲಿಯವರೆಗೂ ಅನೇಕ ರೀತಿಯ ಸೌಲಭ್ಯವನ್ನು ಜಿಲ್ಲೆಯ ಜನತೆಗೆ ನೀಡುತ್ತಾ ಬಂದಿರುವುದು ಅತ್ಯಂತ ಹೆಮ್ಮೆಯ ವಿಚಾರವಾಗಿದೆ ಎಂದರು.
ಸನ್ಮಾನಿತರು ಸಹಕಾರ ಕ್ಷೇತ್ರದಲ್ಲಿ ತಮ್ಮದೇ ಆದ ಕೊಡುಗೆಯನ್ನು ನೀಡಿದ್ದು, ಯುವ ಜನರು ಸಹಕಾರ ಕ್ಷೇತ್ರದಲ್ಲಿ ತಮ್ಮನ್ನು ತೊಡಗಿಸಿಕೊಂಡು ಸಹಕಾರ ಕ್ಷೇತ್ರವನ್ನು ಬೆಳೆಸಬೇಕೆಂದು ಅವರು ನುಡಿದರು.
ಕೊಡಗು ಜಿಲ್ಲಾ ಸಹಕಾರ ಯೂನಿಯನ್ ನಿ. ಮಾಜಿ ಅಧ್ಯಕ್ಷರಾದ ಎಂ.ಪಿ.ಮುತ್ತಪ್ಪ ಅವರು ಮಾತನಾಡಿ ಸಹಕಾರಿ ಕ್ಷೇತ್ರದಲ್ಲಿ ನಿಸ್ವಾರ್ಥ, ಪ್ರಾಮಾಣಿಕತೆ ಇದ್ದಲ್ಲಿ ಮಾತ್ರ ಸಹಕಾರ ಕ್ಷೇತ್ರ ಅಭಿವೃದ್ಧಿಯಾಗುತ್ತದೆ. ಎಲ್ಲರೂ ಒಂದಾಗಿ ಕಾರ್ಯನಿರ್ವಹಿಸಿ ಜಿಲ್ಲೆಯ ಸಹಕಾರಿ ರಂಗವನ್ನು ಮತ್ತಷ್ಟು ಬಲಪಡಿಸಬೇಕು ಎಂದು ಅವರು ತಿಳಿಸಿದರು.

ಕರ್ನಾಟಕ ರಾಜ್ಯ ಸಹಕಾರ ಅಪೆಕ್ಸ್ ಬ್ಯಾಂಕ್ ನಿ. ಹಾಗೂ ಕೊಡಗು ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್‍ನ ನಿರ್ದೇಶಕರಾದ ಕೆ.ಪಿ.ಗಣಪತಿ ಅವರು ಮಾತನಾಡಿ ಸಹಕಾರ ಸಂಸ್ಥೆಗಳಿಗೆ 114 ವರ್ಷಗಳ ಇತಿಹಾಸವಿದ್ದು, ಕೊಡಗು ಜಿಲ್ಲೆ ಸಹಕಾರ ಕ್ಷೇತ್ರದಲ್ಲಿ ರಾಜ್ಯದಲ್ಲಿಯೇ ಪ್ರಥಮ ಸ್ಥಾನದಲ್ಲಿದ್ದು, ತನ್ನದೇ ಆದ ಮಹತ್ವವನ್ನು ಹೊಂದಿದ್ದು, ಪ್ರಾಮಾಣಿಕತೆ ಮತ್ತು ಕರ್ತವ್ಯ ನಿಷ್ಠೆ ಈ ಸಾಧನೆ ಮಾಡಲು ಸಾಧ್ಯವಾಗಿದೆ. ರಾಜ್ಯದಲ್ಲಿ ಸಹಕಾರ ಸಂಸ್ಥೆಗಳಿಗೆ ಏಕರೂಪದ ತಂತ್ರಾಂಶ ರೂಪಿಸಿಕೊಡಲು ಸರ್ಕಾರ ಮುಂದಾಗಬೇಕು ಎಂದು ಅವರು ತಿಳಿಸಿದರು.

ಕೊಡಗು ಸಹಕಾರ ರತ್ನ ಪ್ರಶಸ್ತಿ ಸ್ವೀಕರಿಸಿ ಮಾತನಾಡಿದ ಮುದ್ದಂಡ ಬಿ.ದೇವಯ್ಯ ಅವರು ಪ್ರಾಮಾಣಿಕವಾಗಿ ಕಾರ್ಯನಿರ್ವಹಿಸಿದಾಗ ಯಶಸ್ಸುಗಳಿಸಲು ಸಾಧ್ಯ. ನಿಷ್ಠುರವಾದಿಯಾದರು ಕಠಿಣ ನಿರ್ಧಾರ ತೆಗೆದುಕೊಳ್ಳುವುದರಿಂದ ಸಾಧನೆಯನ್ನು ಮಾಡಬಹುದು. ಸಹಕಾರ ಸಂಸ್ಥೆಗಳನ್ನು ಉಳಿಸಿ ಬೆಳೆಸಬೇಕಾದದ್ದು ಪ್ರತಿಯೊಬ್ಬರ ಕರ್ತವ್ಯವಾಗಿದ್ದು, ಎಲ್ಲರೂ ಒಗ್ಗಟ್ಟಿನಿಂದ ಜಿಲ್ಲೆಯ ಅಭಿವೃದ್ಧಿಗೆ ಶ್ರಮಿಸಬೇಕು ಎಂದು ಅವರು ಕಿವಿಮಾತು ಹೇಳಿದರು.

ವಿರಾಜಪೇಟೆ ಕರ್ನಂಡ ಎಂ.ಸೋಮಯ್ಯ, ನಾಪೋಕ್ಲು ಬೊಪ್ಪೆರ ಸಿ.ಕಾವೇರಿಯಪ್ಪ, ಕುಶಾಲನಗರ ಎಂ.ಎನ್.ಕುಮಾರಪ್ಪ, ಸೋಮವಾರಪೇಟೆ ಉಷಾ ತೇಜಸ್ವಿ ಇವರುಗಳಿಗೆ ಶ್ರೇಷ್ಠ ಸಹಕಾರಿಗಳೆಂದು ಪ್ರಶಸ್ತಿ ನೀಡಿ ಸನ್ಮಾನಿಸಲಾಯಿತು.

ಮಡಿಕೇರಿ ಪಟ್ಟಣ ಸಹಕಾರಿ ಬ್ಯಾಂಕ್ ಮೈಸೂರು ವಿಭಾಗದ ರಾಜ್ಯ ಮಟ್ಟದ ಸಹಕಾರ ಪ್ರಶಸ್ತಿಯನ್ನು ಪಡೆದಿದ್ದು, ಮಡಿಕೇರಿ ಪಟ್ಟಣ ಸಹಕಾರಿ ಬ್ಯಾಂಕ್ ನಿ. ಅಧ್ಯಕ್ಷರಾದ ಬಿ.ಕೆ.ಜಗದೀಶ್, ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪದ್ಮನಾಭ ಕಿಣಿ ಇವರನ್ನು ಸಹ ಸನ್ಮಾನಿಸಲಾಯಿತು. ಜಿಡಿಸಿ ಡಿಪ್ಲೊಮೋ ಕೋರ್ಸ್‍ನಲ್ಲಿ ರಾಜ್ಯಕ್ಕೆ 4ನೇ ರ್ಯಾಂಕ್ ಪಡೆದ ಕರ್ನಾಟಕ ಇನ್‍ಸ್ಟಿಟ್ಯೂಟ್ ಆಫ್ ಕೋ-ಆಪರೇಟಿವ್ ಮ್ಯಾನೇಜ್‍ಮೆಂಟ್, ಮಡಿಕೇರಿ ವಿದ್ಯಾರ್ಥಿನಿಯಾದ ಸ್ಮಿತಾ ಐ.ಬಿ. ಇವರನ್ನು ಸನ್ಮಾನಿಸಲಾಯಿತು.
ಕಾರ್ಯಕ್ರಮದಲ್ಲಿ ಜಿ.ಪಂ. ಉಪಾಧ್ಯಕ್ಷರಾದ ಲೋಕೇಶ್ವರಿ ಗೋಪಾಲ್, ಕೊಡಗು ಜಿಲ್ಲಾ ಸಹಕಾರ ಯೂನಿಯನ್ ಉಪಾಧ್ಯಕ್ಷರಾದ ಪಿ.ಸಿ.ಅಚ್ಚಯ್ಯ, ಸಹಕಾರ ಸಂಘಗಳ ಉಪನಿಬಂಧಕರಾದ ಡಿ.ಭಾಸ್ಕರ ಆಚಾರ್, ಕರ್ನಾಟಕ ಇನ್ಸ್‍ಸ್ಟಿಟ್ಯೂಟ್ ಆಫ್ ಕೋ-ಆಪರೇಟಿವ್ ಮ್ಯಾನೇಜ್‍ಮೆಂಟ್‍ನ ಪ್ರಾಂಶುಪಾಲರಾದ ಪುಟ್ಟಸ್ವಾಮಿ ಇತರರು ಇದ್ದರು.

DSC07644

DSC07650

DSC07639

ನಿಮ್ಮ ಅಭಿಪ್ರಾಯ ತಿಳಿಸಿ

Your email address will not be published. Required fields are marked *