ಬ್ರೇಕಿಂಗ್ ನ್ಯೂಸ್
ಹೈ ಕಮಾಂಡ್ ಸೂಚಿಸಿದ ಅಭ್ಯರ್ಥಿಗಳ ಗೆಲುವಿಗೆ ಶ್ರಮಿಸಲು ಮಡಿಕೇರಿ ನಗರ ಕಾಂಗ್ರೆಸ್ ಸಮಿತಿ ಸಭೆಯಲ್ಲಿ ನಿರ್ಣಯ , ಕೇಂದ್ರದ 546 ಕೋಟಿ ರೂ. 8 ಜಿಲ್ಲೆಗಳಿಗೆ ವಿನಿಯೋಗ ಮುಖ್ಯಮಂತ್ರಿ ಕುಮಾರಸ್ವಾಮಿ , ಕೊಡಗು ಸಂತ್ರಸ್ತರಿಗೆ ಮನೆ ನಿರ್ಮಾಣಕ್ಕೆ ಗುದ್ದಲಿ ಪೂಜೆ ನೆರವೇರಿಸಿದ ಸಿಎಂ , ಅಪರಾಧ ತಡೆಗೆ ಸಾರ್ವಜನಿಕರ ಸಹಭಾಗಿತ್ವ ಅಗತ್ಯ ಕೊಡಗು ಎಸ್‍ಪಿ ಸುಮನ್ ಡಿ.ಪೆನ್ನೇಕರ್ , ಸಶಸ್ತ್ರ ಪಡೆಗಳ ಧ್ವಜ ದಿನಾಚರಣೆ , ಡಿ. 10ರಿಂದ 21ರವರೆಗೆ ವಿಧಾನ ಪರಿಷತ್ ಸದಸ್ಯೆ ವೀಣಾ ಅಚ್ಚಯ್ಯ ಅಲಭ್ಯ , ಅಯ್ಯಂಡ್ರ ರೋಹಿಣಿ ನಾಣಯ್ಯನವರ ಕುಂಚದಲ್ಲಿ ಅರಳಿದ ಭತ್ತದ ತೆನೆಗೂಡು , ಮಡಿಕೇರಿಯಲ್ಲಿ ಸ್ವಚ್ಛತಾ ಜಾಗೃತಿ ಜಾಥ ಸ್ವಚ್ಛ ಪರಿಸರ ನಿರ್ಮಾಣಕ್ಕೆ ಜಯ ಚಿಣ್ಣಪ್ಪ  ಕರೆ  , ಗೌಡ ಜನಾಂಗದ ಕ್ರಿಕೆಟ್ ಪಂದ್ಯಾಟ , ಹಳೇ ವಿದ್ಯಾರ್ಥಿಗಳಿಂದ ಕೊಡುಗೆ ,

ಪ್ರತಿಭೆಯನ್ನು ಅನಾವರಣಗೊಳಿಸಲು ಸಾಂಸ್ಕೃತಿಕ ಸ್ಪರ್ಧೆಗಳು ಉತ್ತಮ ವೇದಿಕೆ

Posted on: November 20, 2018

DSC07630
ಮಡಿಕೇರಿ : ಪ್ರತಿಯೊಬ್ಬ ವಿದ್ಯಾರ್ಥಿಯಲ್ಲಿಯೂ ಒಂದು ತರನಾದ ಪ್ರತಿಭೆ ಇರುತ್ತದೆ. ಆ ಪ್ರತಿಭೆಯನ್ನು ಅನಾವರಣಗೊಳಿಸಲು ಸಾಂಸ್ಕೃತಿಕ ಸ್ಪರ್ಧೆಗಳು ಉತ್ತಮ ವೇದಿಕೆಯನ್ನು ಒದಗಿಸಿ ಕೊಡುತ್ತವೆ ಎಂದು ಸರ್ಕಾರಿ ಪದವಿ ಪೂರ್ವ ಕಾಲೇಜು ಅಭಿವೃದ್ಧಿ ಸಮಿತಿಯ ಉಪಾಧ್ಯಕ್ಷರಾದ ಎ.ಪಿ.ಧನಂಜಯ್ ಅವರು ತಿಳಿಸಿದರು.

ಪದವಿ ಪೂರ್ವ ಶಿಕ್ಷಣ ಇಲಾಖೆ ಮತ್ತು ಮಡಿಕೇರಿ ಸರ್ಕಾರಿ ಪದವಿ ಪೂರ್ವ ಕಾಲೇಜು ಇವರ ಸಂಯುಕ್ತ ಆಶ್ರಯದಲ್ಲಿ ಕಾಲೇಜಿನ ಫೀಲ್ಡ್ ಮಾರ್ಷಲ್ ಕೆ.ಎಂ.ಕಾರ್ಯಪ್ಪ ಸಭಾಂಗಣದಲ್ಲಿ ಮಂಗಳವಾರ ನಡೆದ ಜಿಲ್ಲಾ ಮಟ್ಟದ ಸಾಂಸ್ಕೃತಿಕ ಸ್ಪರ್ಧೆಗಳ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.
ಸ್ಪರ್ಧೆಯಲ್ಲಿ ಸೋಲು ಗೆಲುವು ಮುಖ್ಯವಲ್ಲ. ಪ್ರತಿಭೆಯನ್ನು ಅನಾವರಣಗೊಳಿಸಲು ಸಿಗುವ ಉತ್ತಮ ಅವಕಾಶವನ್ನು ಸದುಪಯೋಗಪಡಿಸಿಕೊಳ್ಳುವಂತೆ ವಿದ್ಯಾರ್ಥಿಗಳಿಗೆ ಕರೆ ನೀಡಿದರು.
ಪದವಿ ಪೂರ್ವ ಶಿಕ್ಷಣ ಇಲಾಖೆಯ ಉಪ ನಿರ್ದೇಶಕರಾದ ಜಿ.ಕೆಂಚಪ್ಪ ಅವರು ಮಾತನಾಡಿ ವಿದ್ಯಾರ್ಥಿಗಳು ಶಿಕ್ಷಣದೊಂದಿಗೆ ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ಭಾಗವಹಿಸಿ ತಮ್ಮ ಪ್ರತಿಭೆಯನ್ನು ಅನಾವರಣಗೊಳಿಸಿಕೊಂಡು ಶಿಕ್ಷಣದೊಂದಿಗೆ ಸಾಂಸ್ಕೃತಿಕ ಕಲೆಯನ್ನು ಮೈಗೂಡಿಸಿಕೊಂಡು ಸೋಲು ಗೆಲುವುಗಳನ್ನು ಸಮನಾಗಿ ಸ್ವೀಕರಿಸಬೇಕು ಎಂದು ವಿದ್ಯಾರ್ಥಿಗಳಿಗೆ ಅವರು ತಿಳಿಸಿದರು.

ಪ್ರಾಚಾರ್ಯರ ಸಂಘದ ಅಧ್ಯಕ್ಷರಾದ ಕೆ.ಎಂ.ಭವಾನಿ ಅವರು ಮಾತನಾಡಿ ಯುವಜನರಲ್ಲಿ ಇರುವಂತಹ ಪ್ರತಿಭೆಯನ್ನು ಅನಾವರಣ ಮಾಡಲು ಈ ಕಾರ್ಯಕ್ರಮವು ಒಂದು ಸುಂದರ ವೇದಿಕೆಯನ್ನು ನಿರ್ಮಿಸಿಕೊಟ್ಟಿದೆ. ವಿದ್ಯಾರ್ಥಿಗಳಲ್ಲಿ ಹಿಂಜರಿಕೆ ಇರಬಾರದು ಎಂದು ಕಿವಿಮಾತು ಹೇಳಿದರು.
ಪ್ರಾಂಶುಪಾಲರ ಸಂಘದ ಕಾರ್ಯದರ್ಶಿಗಳಾದ ಮಹಾಲಿಂಗಯ್ಯ ಅವರು ಮಾತನಾಡಿ ವಿದ್ಯಾರ್ಥಿಗಳು ಹಿಂಜರಿಕೆ ಮನೋಭಾವದಿಂದ ಹೊರಬರಬೇಕು. ಆಗ ನಿಮ್ಮ ವ್ಯಕ್ತಿತ್ವವು ಉತ್ತಮವಾಗಿ ರೂಪುಗೊಳ್ಳುತ್ತದೆ ಎಂದು ಅವರು ತಿಳಿಸಿದರು.

ಸರ್ಕಾರಿ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲರಾದ ಪಿ.ಆರ್.ವಿಜಯ ಅವರು ಮಾತನಾಡಿ ಸೋತಾಗ ಬೇಸರ ಪಡಬಾರದು. ಗೆದ್ದಾಗ ಸಂತೋಷ ಪಡಬಾರದು. ಸ್ಪರ್ಧೆಯನ್ನು ಒಂದು ಸವಾಲಾಗಿ ತೆಗೆದುಕೊಂಡು ಕ್ರಿಯಾಶೀಲವಾಗಿ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವಂತೆ ಕಿವಿಮಾತು ಹೇಳಿದರು.
ಕಾರ್ಯಕ್ರಮದಲ್ಲಿ ಜಿಲ್ಲೆಯ ವಿವಿಧ ಪದವಿ ಪೂರ್ವ ಕಾಲೇಜುಗಳ ವಿದ್ಯಾರ್ಥಿಗಳು, ಪ್ರಾಚಾರ್ಯರು ಇತರರು ಇದ್ದರು. ಪ್ರಾಚಾರ್ಯರಾದ ನಂದೀಶ್ ಕಾರ್ಯಕ್ರಮವನ್ನು ನಿರೂಪಿಸಿದರು.

DSC07624

DSC07629

ನಿಮ್ಮ ಅಭಿಪ್ರಾಯ ತಿಳಿಸಿ

Your email address will not be published. Required fields are marked *