ಬ್ರೇಕಿಂಗ್ ನ್ಯೂಸ್
ಹೈ ಕಮಾಂಡ್ ಸೂಚಿಸಿದ ಅಭ್ಯರ್ಥಿಗಳ ಗೆಲುವಿಗೆ ಶ್ರಮಿಸಲು ಮಡಿಕೇರಿ ನಗರ ಕಾಂಗ್ರೆಸ್ ಸಮಿತಿ ಸಭೆಯಲ್ಲಿ ನಿರ್ಣಯ , ಕೇಂದ್ರದ 546 ಕೋಟಿ ರೂ. 8 ಜಿಲ್ಲೆಗಳಿಗೆ ವಿನಿಯೋಗ ಮುಖ್ಯಮಂತ್ರಿ ಕುಮಾರಸ್ವಾಮಿ , ಕೊಡಗು ಸಂತ್ರಸ್ತರಿಗೆ ಮನೆ ನಿರ್ಮಾಣಕ್ಕೆ ಗುದ್ದಲಿ ಪೂಜೆ ನೆರವೇರಿಸಿದ ಸಿಎಂ , ಅಪರಾಧ ತಡೆಗೆ ಸಾರ್ವಜನಿಕರ ಸಹಭಾಗಿತ್ವ ಅಗತ್ಯ ಕೊಡಗು ಎಸ್‍ಪಿ ಸುಮನ್ ಡಿ.ಪೆನ್ನೇಕರ್ , ಸಶಸ್ತ್ರ ಪಡೆಗಳ ಧ್ವಜ ದಿನಾಚರಣೆ , ಡಿ. 10ರಿಂದ 21ರವರೆಗೆ ವಿಧಾನ ಪರಿಷತ್ ಸದಸ್ಯೆ ವೀಣಾ ಅಚ್ಚಯ್ಯ ಅಲಭ್ಯ , ಅಯ್ಯಂಡ್ರ ರೋಹಿಣಿ ನಾಣಯ್ಯನವರ ಕುಂಚದಲ್ಲಿ ಅರಳಿದ ಭತ್ತದ ತೆನೆಗೂಡು , ಮಡಿಕೇರಿಯಲ್ಲಿ ಸ್ವಚ್ಛತಾ ಜಾಗೃತಿ ಜಾಥ ಸ್ವಚ್ಛ ಪರಿಸರ ನಿರ್ಮಾಣಕ್ಕೆ ಜಯ ಚಿಣ್ಣಪ್ಪ  ಕರೆ  , ಗೌಡ ಜನಾಂಗದ ಕ್ರಿಕೆಟ್ ಪಂದ್ಯಾಟ , ಹಳೇ ವಿದ್ಯಾರ್ಥಿಗಳಿಂದ ಕೊಡುಗೆ ,

ಬಿಳಿಗೇರಿಯಲ್ಲಿ ಗಮನ ಸೆಳೆದ ಗ್ರಾಮೀಣ ಕ್ರೀಡಾಕೂಟ

Posted on: November 19, 2018

Z-SPORTS-2

ಮಡಿಕೇರಿ : ಬಿಳಿಗೇರಿಯ ಶ್ರೀ ಭಗವತಿ ಯುವಕ ಸಂಘ, ಕೊಡಗು ಜಿಲ್ಲಾ ಪಂಚಾಯಿತಿ, ತಾಲ್ಲೂಕು ಯುವ ಒಕ್ಕೂಟ, ಮಡಿಕೇರಿ ನೆಹರು ಯುವ ಕೇಂದ್ರ ಹಾಗೂ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಇವರ ಸಹಯೋಗದಲ್ಲಿ ಬಿಳಿಗೇರಿಯ ಪ್ರಾಥಮಿಕ ಶಾಲಾ ಮೈದಾನದಲ್ಲಿ 42ನೇ ವರ್ಷದ ಗ್ರಾಮೀಣ ಕ್ರೀಡಾಕೂಟ ನಡೆಯಿತು.

ಆಟೋಟ ಸ್ಪರ್ಧೆಗಳಿಗೆ ಸಂಘದ ಅಧ್ಯಕ್ಷ ಮಂಡುವಂಡ ಟಾಟಾ ದೇವಯ್ಯ ತೆಂಗಿನ ಕಾಯಿಗೆ ಗುಂಡು ಹೊಡೆಯುವ ಮೂಲಕ ಚಾಲನೆ ನೀಡಿದರು.

ಮಧ್ಯಾಹ್ನ ನಡೆದ ಸಮಾರೋಪ ಸಮಾರಂಭ ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿ ಮಾತನಾಡಿದ ಮೇಕೇರಿ ಗ್ರಾ.ಪಂ ಅಧ್ಯಕ್ಷೆ ಕೆ.ಕೆ. ಜಯಂತಿ, ಗ್ರಾಮೀಣ ಕ್ರೀಡೆಗಳನ್ನು ಉಳಿಸಿ ಬೆಳೆಸುವಂತೆ ಕರೆ ನೀಡಿದರು. ಭಗವತಿ ಯುವಕ ಸಂಘದ ಪದಾಧಿಕಾರಿಗಳು ಒಗ್ಗೂಡಿ ಕ್ರೀಡಾಕೂಟವನ್ನು ಆಯೋಜಿಸುವ ಮೂಲಕ ಇತರರಿಗೆ ಮಾದರಿಯಾಗಿದ್ದಾರೆ ಎಂದು ಶ್ಲಾಘನೆ ವ್ಯಕ್ತಡಿಸಿದರು. ಇದೇ ಸಂದರ್ಭ ಪಂಚಾಯತ್ ವತಿಯಿಂದ ಕ್ರೀಡಾಕೂಟಕ್ಕೆ ಪ್ರೋತ್ಸಾಹ ಧನವಾಗಿ 2 ಸಾವಿರ ರೂ. ಗಳ ಚೆಕ್‍ನ್ನು ಸಂಘದ ಅಧ್ಯಕ್ಷರಿಗೆ ನೀಡಿದರು.

ಮುಖ್ಯ  ಅತಿಥಿಗಳಾಗಿ ಆಗಮಿಸಿದ್ದ ಕೊಡಗು ಜಿಲ್ಲಾ ಯುವ ಒಕ್ಕೂಟದ ಮಾಜಿ ಅಧ್ಯಕ್ಷರಾದ ಮಂಡುವಂಡ ಜೋಯಪ್ಪ ಹಾಗೂ ಹಾಕತ್ತೂರಿನ ಪ್ರಾ.ಕೃ.ಪ.ಸ.ಸಂಘದ ಅಧ್ಯಕ್ಷರಾದ ಸಾಬು ತಿಮ್ಮಯ್ಯ ಕ್ರೀಡಾಕೂಟದ ಕುರಿತು ಮೆಚ್ಚುಗೆ ವ್ಯಕ್ತಪಡಿಸಿದರು.

ಸಾರ್ವಜನಿಕರಿಗಾಗಿ ಆಯೋಜಿಸಿದ್ದ ತೆಂಗಿನಕಾಯಿಗೆ ಗುಂಡು ಹೊಡೆಯುವ ಸ್ಪರ್ಧೆಯಲ್ಲಿ ಪ್ರಥಮ ಬಹುಮಾನವನ್ನು ಟಾಟಾ ದೇವಯ್ಯ, ದ್ವಿತೀಯ ಬಹುಮಾನವನ್ನು ಐರೀರ ಭರತ್, ತೃತೀಯ ಬಹುಮಾನವನ್ನು ಮಂಡುವಂಡ ದರ್ಶನ್ ಪಡೆದುಕೊಂಡರು.

ಪುರುಷರ ವಿಭಾಗದಲ್ಲಿ ಭಾರದ ಗುಂಡು ಎಸೆಯುವ ಸ್ಪರ್ಧೆಯಲ್ಲಿ ಪ್ರಥಮ ಬಹುಮಾನವನ್ನು ಪರ್ಲಕೋಟಿ ಕಿಶನ್, ದ್ವಿತೀಯ ಬಹುಮಾನವನ್ನು ಬಾಳಾಡಿ ಮನೋಜ್ ತಮ್ಮದಾಗಿಸಿಕೊಂಡರು.
ಮಹಿಳೆಯರ ಭಾರದ ಗುಂಡು ಎಸೆತ ಸ್ಪರ್ಧೆಯಲ್ಲಿ ಪ್ರಥಮ ಪರ್ಲಕೋಟಿ ಪವಿ ಕುಶಾಲಪ್ಪ, ದ್ವಿತೀಯ ಬಹುಮಾನವನ್ನು ದಂಬೆಕೋಡಿ ರಾಣಿ ಮಾಚಯ್ಯ ಪಡೆದುಕೊಂಡರು.

ಮಹಿಳೆಯರಿಗೆ, ಹಿರಿಯ ಬಾಲಕ ಬಾಲಕಿಯರಿಗೆ, ಕಿರಿಯ ಬಾಲಕ  ಬಾಲಕಿಯರಿಗೆ ಓಟದ ಸ್ಪರ್ಧೆ, ಸಣ್ಣ ಮಕ್ಕಳಿಗೆ ಕಾಳು ಹೆಕ್ಕುವುದು,  ಮಹಿಳೆಯರಿಗೆ ನಿಂಬೆ ಚಮಚ ಓಟದ ಸ್ಪರ್ಧೆ ಸೇರಿದಂತೆ 14 ಮಾದರಿಯ ಸ್ಪರ್ಧೆಗಳನ್ನು ಆಯೋಜಿಸಲಾಗಿತ್ತು.
ಕ್ರೀಡಾಕೂಟದ ಸಭಾ ಕಾರ್ಯಕ್ರಮದಲ್ಲಿ ಭಗವತಿ ಯುವಕ ಸಂಘದ ಕಾರ್ಯದರ್ಶಿ ಪ್ರಸಾದ್ ಬಿ.ಎನ್, ಖಜಾಂಜಿ ರೇಣುಕುಮಾರ್, ಮೇಕೇರಿ ಗ್ರಾ.ಪಂ ಸದಸ್ಯರಾದ ವಾಣಿ ಚರ್ಮಣ, ಪುಪ್ಪಾ ನಾಣಯ್ಯ ಸೇರಿದಂತೆ ಭಗವತಿ ಸಂಘದ ಪದಾಧಿಕಾರಿಗಳು ಪಾಲ್ಗೊಂಡಿದ್ದರು.

ನಿಮ್ಮ ಅಭಿಪ್ರಾಯ ತಿಳಿಸಿ

Your email address will not be published. Required fields are marked *