ಬ್ರೇಕಿಂಗ್ ನ್ಯೂಸ್
ಹೈ ಕಮಾಂಡ್ ಸೂಚಿಸಿದ ಅಭ್ಯರ್ಥಿಗಳ ಗೆಲುವಿಗೆ ಶ್ರಮಿಸಲು ಮಡಿಕೇರಿ ನಗರ ಕಾಂಗ್ರೆಸ್ ಸಮಿತಿ ಸಭೆಯಲ್ಲಿ ನಿರ್ಣಯ , ಕೇಂದ್ರದ 546 ಕೋಟಿ ರೂ. 8 ಜಿಲ್ಲೆಗಳಿಗೆ ವಿನಿಯೋಗ ಮುಖ್ಯಮಂತ್ರಿ ಕುಮಾರಸ್ವಾಮಿ , ಕೊಡಗು ಸಂತ್ರಸ್ತರಿಗೆ ಮನೆ ನಿರ್ಮಾಣಕ್ಕೆ ಗುದ್ದಲಿ ಪೂಜೆ ನೆರವೇರಿಸಿದ ಸಿಎಂ , ಅಪರಾಧ ತಡೆಗೆ ಸಾರ್ವಜನಿಕರ ಸಹಭಾಗಿತ್ವ ಅಗತ್ಯ ಕೊಡಗು ಎಸ್‍ಪಿ ಸುಮನ್ ಡಿ.ಪೆನ್ನೇಕರ್ , ಸಶಸ್ತ್ರ ಪಡೆಗಳ ಧ್ವಜ ದಿನಾಚರಣೆ , ಡಿ. 10ರಿಂದ 21ರವರೆಗೆ ವಿಧಾನ ಪರಿಷತ್ ಸದಸ್ಯೆ ವೀಣಾ ಅಚ್ಚಯ್ಯ ಅಲಭ್ಯ , ಅಯ್ಯಂಡ್ರ ರೋಹಿಣಿ ನಾಣಯ್ಯನವರ ಕುಂಚದಲ್ಲಿ ಅರಳಿದ ಭತ್ತದ ತೆನೆಗೂಡು , ಮಡಿಕೇರಿಯಲ್ಲಿ ಸ್ವಚ್ಛತಾ ಜಾಗೃತಿ ಜಾಥ ಸ್ವಚ್ಛ ಪರಿಸರ ನಿರ್ಮಾಣಕ್ಕೆ ಜಯ ಚಿಣ್ಣಪ್ಪ  ಕರೆ  , ಗೌಡ ಜನಾಂಗದ ಕ್ರಿಕೆಟ್ ಪಂದ್ಯಾಟ , ಹಳೇ ವಿದ್ಯಾರ್ಥಿಗಳಿಂದ ಕೊಡುಗೆ ,

ಲಂಚ ಸ್ವೀಕರಿಸುತ್ತಿದ್ದ ಚೆಸ್ಕಾಂ ಅಧಿಕಾರಿ ಎಸಿಬಿ ಬಲೆಗೆ

Posted on: November 20, 2018

 

shaukath aali

ಮಡಿಕೇರಿ : ಕೃಷಿ ಪಂಪ್ ಸೆಟ್ ಗೆ ವಿದ್ಯುತ್ ಸಂಪರ್ಕ ಕಲ್ಪಿಸುವುದಕ್ಕಾಗಿ 7500 ರೂ ಲಂಚ ಪಡೆಯುತ್ತಿದ್ದ ಚೆಸ್ಕಾಂನ ಮಡಿಕೇರಿ ಉಪ ವಿಭಾಗದ ಸಹಾಯಕ ಕಾರ್ಯಪಾಲಕ ಅಭಯಂತರ ಆಜಾದ್ ಶೌಕತ್ ಆಲಿ ದೊಡ್ಡಮನಿ ಅವರನ್ನು ಭ್ರಷ್ಟಾಚಾರ ನಿಗ್ರಹದಳ ವಶಕ್ಕೆ ಪಡೆದಿದೆ.

ಚೇರಂಬಾಣೆ ಗ್ರಾಮದ ಕೃಷಿಕ ಕಾವೇರಪ್ಪ ಎಂಬುವವರು ಕೃಷಿ ಪಂಪ್ ಸೆಟ್ ಗೆ ವಿದ್ಯುತ್ ಸಂಪರ್ಕ ಕಲ್ಪಿಸಲು ಅರ್ಜಿ ಸಲ್ಲಿಸಿದ್ದರು. ಆದರೆ ವಿದ್ಯುತ್ ಸಂಪರ್ಕ್ಕಾಗಿ ಲಂಚದ ಭೇಡಿಕೆಯಿಟ್ಟ ಕಾರಣ ಶೌಕತ್ ಆಲಿ ದೊಡ್ಡಮನಿ ಅವರ ವಿರುದ್ಧ ಎಸಿಬಿಗೆ ದೂರು ನೀಡಿದ್ದರು ಎಂದು ಹೇಳಲಾಗಿದೆ. ಇಂದು ಓದಿದ ತಮ್ಮ ಕಚೇರಿಯಲ್ಲಿ ಕಾವೆರಪ್ಪ ಅವರಿಂದ ರೂ 7500 ನ್ನು ಲಂಚದ ರೂಪದಲ್ಲಿ ಪಡೆಯುತ್ತಿದ್ದ ಸಂದರ್ಭ ದಾಳಿ ನಡೆಸಿದ ಎಸಿಬಿ ಅಧಿಕಾರಿಗಳು ಶೌಕತ್ ಆಲಿ ದೊಡ್ಡಮನಿ ಅವರನ್ನು ವಶಕ್ಕೆ ಪಡೆದಿದ್ದಾರೆ.

ಎಸಿಬಿ ಅಧೀಕ್ಷಕ ಪೂರ್ಣ ಚಂದ್ರ ತೇಜಸ್ವಿ ನೇತೃತ್ವದ ಅಧಿಕಾರಿಗಳು ಹಾಗೂ ಸಿಬ್ಬಂದಿಗಳ ತಂಡ ಕಾರ್ಯಾಚರಣೆ ನಡೆಸಿತು.

ನಿಮ್ಮ ಅಭಿಪ್ರಾಯ ತಿಳಿಸಿ

Your email address will not be published. Required fields are marked *